Breaking News

HDK ವಿರುದ್ಧ ಅವಹೇಳನಕಾರಿ ಪದ ಬಳಕೆ: ಕ್ಷಮೆ‌ ಕೇಳಲು ಕೇಂದ್ರ ಸಚಿವ ಜೋಶಿ ಆಗ್ರಹ

Spread the love

ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಸಿರುವ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ.

 

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಒಬ್ಬ ಜನಪ್ರತಿನಿಧಿ, ಕೇಂದ್ರ ಸಚಿವರ ಬಗ್ಗೆ ಅಸಭ್ಯ ಭಾಷೆ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಲೋಕಾಯುಕ್ತ ಎಡಿಜಿಪಿಗೆ ಸರ್ವೀಸ್ ಕಂಡಕ್ಟ್ ನಿಯಮದ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕ್ಷಮಾಪಣೆ ಕೇಳಲಿ ಎಂದು ಸೂಚಿಸಿದರು.

ಎಚ್.ಡಿ.ಕುಮಾರಸ್ವಾಮಿ ಅವರು ಯಾವತ್ತೂ ಯಾರ ಬಗ್ಗೆಯೂ ಹೀಗೆ ಅಸಭ್ಯ ಭಾಷೆ ಬಳಸಿದವರಲ್ಲ. ಈ ಅಧಿಕಾರಿ ಬಗ್ಗೆಯೂ ಅವರು ಏಕವಚನದಲ್ಲಿ ಮಾತನಾಡಿಲ್ಲ ಎಂದು ಹೇಳಿದರು.

ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟ ಪದ ಬಳಸಿರುವುದು ಅಧಿಕಾರಿಯ ಅಹಂಕಾರದ ಪರಮಾವಧಿಯಾಗಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಅವರು ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಒಬ್ಬ ಜನಪ್ರತಿನಿಧಿ ಬಗ್ಗೆ ಲೋಕಾಯುಕ್ತ ಎಡಿಜಿಪಿ ಕೆಟ್ಟ ಪದ ಬಳಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಹಿಡಿದ ಕೈನ್ನಡಿ. ಇದು ಕಾಂಗ್ರೆಸ್ ಗೆ ಮುಳುವಾಗಲಿದೆ. ಕಾಂಗ್ರೆಸ್ ಎಂತೆಂಥ ಅಧಿಕಾರಿಗಳನ್ನು ಬೆಳೆಸುತ್ತಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಕಿಡಿ ಕಾರಿದರು.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ