ಬೆಳಗಾವಿ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ರವಿವಾರ ಬೆಳಗ್ಗೆ(ಸೆ29) ನಡೆದಿದೆ.
ಯಲ್ಲವ್ವ ಅರ್ಜುನ ಕರಿಹೋಳ (30) ಎಂಬಾಕೆ ಸಾತ್ವಿಕ್ (5) ಹಾಗೂ ಒಂದು ವರ್ಷದ ಮುತ್ತಪ್ಪ ನೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ.
ಮೃತಪಟ್ಟ ದುರ್ದೈವಿಗಳು.ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.