ಬೆಂಗಳೂರು : ರಾಜ್ಯದ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಮಧ್ಯೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು, ಇಂದು ನವ ದುರ್ಗಾ ಪೂಜೆ ಮತ್ತು ಹೋಮದಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ.
ವಾರಕ್ಕೆರಡು ಬಾರಿಯಂತೆ ನವದೆಹಲಿಯ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿರುವ ರಮೇಶ್ ಜಾರಕಿಹೊಳಿ, ರಾಜ್ಯ ರಾಜಕೀಯದ ಸಂದಿಗ್ಧ ಪರಿಸ್ಥಿತಿಯಲ್ಲಿ ದೇವರ ಮೊರೆ ಹೋಗಿರುವುದು ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

ಅದಕ್ಕೂ ಮೊದಲು ರಾಜ್ಯದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರಾಜ್ಯದ ಅಣೆಕಟ್ಟೆಗಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡುತ್ತಿರುವ ಬಗ್ಗೆ ಚರ್ಚಿಸಿದರು.
Laxmi News 24×7