Breaking News

ಕೆಟ್ಟುನಿಂತ ಶುದ್ಧ ನೀರಿನ ಘಟಕಗಳು

Spread the love

ರಾಯಬಾಗ: ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳು ಕೆಟ್ಟು ನಿಂತಿವೆ. 107 ಘಟಕಗಳಲ್ಲಿ ಸುಮಾರು 25 ಘಟಕಗಳು ವರ್ಷದ ಹಿಂದಿನಿಂದಲೂ ಬಂದ್ ಆಗಿವೆ. ಮತ್ತೆ ಕೆಲವು ನಿರ್ವಹಣೆ ಇಲ್ಲದೇ ಸೊರಗಿವೆ. ಇದರಿಂದ ತಾಲ್ಲೂಕಿನ ಜನರಿಗೆ ಶುದ್ಧ ನೀರು ಇನ್ನೂ ಕನಸಾಗಿದೆ.

 

ಈ ಘಟಕಗಳನ್ನು ಏಜೆನ್ಸಿಗಳ ಅಸಮರ್ಪಕ ನಿರ್ವಹಣೆ ಮಾಡುತ್ತಿಲ್ಲ. ಮೋಟರ್‌ ದುರಸ್ತಿ, ಫಿಲ್ಟರ್‌ ಸಮಸ್ಯೆ, ವಿದ್ಯುತ್‌ ಸಮಸ್ಯೆ, ಪೈಪ್‌ಲೈನ್‌ಗಳಲ್ಲಿ ದೋಷ ಮುಂತಾದ ಕಾರಣಗಳಿಂದ ಸ್ಥಗಿತಗೊಂಡಿವೆ. ಒಮ್ಮೆ ಸ್ಥಗಿತಗೊಂಡರೆ ಮತ್ತೆ ಅದರ ದುರಸ್ತಿಗೆ ವರ್ಷಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿರುವ ಗ್ರಾಮೀಣ ಕುಡಿಯುವ ಹಾಗೂ ನೈರ್ಮಲ್ಯ ಇಲಾಖೆಯಿಂದ ನಿರ್ಮಾಣವಾಗಿದ್ದ ಶುದ್ಧ ನೀರಿನ ಘಟಕ ಕೆಟ್ಟು ನಿಂತು ಹಲವು ತಿಂಗಳಾಗಿವೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರಿಗೆ ದಕ್ಕದಂತಾಗಿದೆ. 2021-22ನೇ ಸಾಲಿನಲ್ಲಿ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ₹12 ಲಕ್ಷ ವೆಚ್ಚದಲ್ಲಿ ಈ ಘಟಕ ನಿರ್ಮಾಣವಾಗಿದೆ. ರಾಯಬಾಗ ಮತಕ್ಷೇತ್ರದ ಶಾಸಕ ಡಿ.ಎಂ.ಐಹೊಳೆ ಈ ಘಟಕ ಉದ್ಘಾಟಿಸಿದ್ದರು.

ನಿರ್ವಹಣೆ ವಿಫಲ:

‘ಸರ್ಕಾರ ಲಕ್ಷಾಂತರ ಹಣ ಖರ್ಚು ಮಾಡಿ ನಿರ್ಮಿಸಿದ ಶುದ್ಧ ನೀರಿನ ಘಟಕಗಳನ್ನು ನಿರ್ವಹಣೆ ಮಾಡುವಲ್ಲಿ ಸಂಬಂಧಪಟ್ಟ ಇಲಾಖೆ ಸಂಪೂರ್ಣ ವಿಫಲವಾಗಿದೆ. ಜಿಲ್ಲಾ ಪಂಚಾಯಿತಿಗೆ ಬರುವ ಕುಡಿಯುವ ಹಾಗೂ ನೈರ್ಮಲ್ಯ ಇಲಾಖೆ ಸುಮಾರು ತಿಂಗಳುಗಳಿಂದ ಈ ಘಟಕದ ವಿದ್ಯುತ್ ಬಿಲ್ ಕೂಡ ಪಾವತಿಸಿಲ್ಲ’ ಎಂದು ಹೆಸ್ಕಾಂ ಅಧಿಕಾರಿಗಳು ಹೇಳುತ್ತಾರೆ.

 ಹಿಡಕಲ್ ಗ್ರಾಮದ ಲಕ್ಷ್ಮಿ ದೇವಾಲಯದ ಬಳಿ ಬಳಕೆಗೆ ಬಾರದ ಶುದ್ಧ ಕುಡಿಯುವ ನೀರಿನ ಘಟಕಈ ಘಟಕ ಆರಂಭಗೊಂಡು ಕೆಲವು ತಿಂಗಳು ನಂತರ ಕೆಟ್ಟಿದೆ. ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ರೋಗಿಗಳ ಸಂಬಂಧಿಕರು ಕೂಡ ಅಶುದ್ಧ ನೀರು ಕುಡಿದು ರೋಗ ಬರಿಸಿಕೊಳ್ಳುವಂತಾಗಿದೆ.


Spread the love

About Laxminews 24x7

Check Also

ಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Spread the love ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣದ ಕಾಂಪೌಂಡ್ ಬಳಿಯೇ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ