Breaking News
Home / ರಾಜ್ಯ / ಆನ್‍ಲೈನ್ ಗೇಮ್ ಹುಚ್ಚಿನಿಂದ ವ್ಯಕ್ತಿಯೊಬ್ಬ 16 ಲಕ್ಷ ರೂ. ಕಳೆದುಕೊಂಡು ಇದೀಗ ಆತ್ಮಹತ್ಯೆಗೆ ಶರಣಾದ

ಆನ್‍ಲೈನ್ ಗೇಮ್ ಹುಚ್ಚಿನಿಂದ ವ್ಯಕ್ತಿಯೊಬ್ಬ 16 ಲಕ್ಷ ರೂ. ಕಳೆದುಕೊಂಡು ಇದೀಗ ಆತ್ಮಹತ್ಯೆಗೆ ಶರಣಾದ

Spread the love

ಹೈದರಾಬಾದ್: ಆನ್‍ಲೈನ್ ಗೇಮ್ ಹುಚ್ಚಿನಿಂದ ವ್ಯಕ್ತಿಯೊಬ್ಬ 16 ಲಕ್ಷ ರೂ. ಕಳೆದುಕೊಂಡು ಇದೀಗ ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಜಗದೀಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಈತ ಎಲ್‍ಬಿ ನಗರ ನಿವಾಸಿ. ಆನ್‍ಲೈನ್ ಗೇಮ್ ಚಟದಿಂದಾಗಿ ಜಗದೀಶ್ ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡನು. ಅಲ್ಲದೆ ಸಾಲ ತೀರಿಸಲು ಅಸಾಧ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆ ದಾರಿ ಕಾಣದೆ ತನ್ನ ಪ್ರಾಣವನ್ನೇ ಕಳೆದುಕೊಳ್ಳಲು ನಿರ್ಧರಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕೆಲವು ದಿನಗಳ ಹಿಂದೆ ಜಗದೀಶ್ ತಂದೆ 16 ಲಕ್ಷ ರೂ. ಸಾಲ ತೀರಿಸಿದ್ದರು. ಆದರೆ ಈತ ಮತ್ತೆ ಆನ್‍ಲೈನ್ ಆಟಗಳನ್ನು ಆಡಲು ಪ್ರಾರಂಭಿಸಿದ. ಇದರೊಂದಿಗೆ ಜಗದೀಶ್ ಸಂಪೂರ್ಣವಾಗಿ ಭಾರೀ ಸಾಲದ ಸುಳಿಯಲ್ಲಿ ಸಿಲುಕಿಕೊಂಡ. ಇದರಿಂದ ಖಿನ್ನತೆಗೊಳಗಾಗಿ ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಡಿಯೋದಲ್ಲಿ ಜಗದೀಶ್ ಆತ್ಮಹತ್ಯೆಗೆ ಕಾರಣಗಳನ್ನು ತಿಳಿಸಿದ್ದಾನೆ. ಈ ಸಂಬಂಧ ಜಗದೀಶ್ ಪೋಷಕರು ನೀಡಿರುವ ದೂರು ಸ್ವೀಕರಿಸಿದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

Spread the love ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ