ತುಮಕೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಂದಿನಿಂದ ಲೋಕಾಯುಕ್ತ ಅಧಿಕಾರಿಗಳು ತಮ್ಮ ನಾಲ್ಕು ತಂಡಗಳ ಜೊತೆಗೆ ತನಿಖೆಯನ್ನು ಆರಂಭಿಸಿವೆ. ಇದರ ಬೆನ್ನಲ್ಲೇ ಬಿಜೆಪಿಯ ಶಾಸಕ ಸುರೇಶ್ ಗೌಡ ಡಿಸೆಂಬರ್ ನಲ್ಲಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನವರೇ ಸಿಎಂ ಸ್ಥಾನದಿಂದ ಕೆಳಗಿಳಿಸಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಡಿಸೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಇಳಿಸುತ್ತಾರೆ. ಕಾಂಗ್ರೆಸ್ ನವರೇ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸುತ್ತಾರೆ. ಮುಂದೆ ಮಾರ್ಚ್ ಮತ್ತು ಏಪ್ರಿನಲ್ಲಿ ಚುನಾವಣೆ ನಡೆಯಲಿದೆ. ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ತುಮಕೂರಿನಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಭವಿಷ್ಯ ನುಡಿದಿದ್ದಾರೆ.