ಹುಬ್ಬಳ್ಳಿ: ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು. ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ ಎಂದು ಸಂಸದ, ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.
ಸಿಎಂ ದಸರಾ ಉದ್ಘಾಟನೆ ವಿಚಾರವಾಗಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಎನ್ನುವ, ನೈತಿಕತೆ ಬಗ್ಗೆ ಮಾತನಾಡುತ್ತಿದ್ದ ಸಿದ್ದರಾಮಯ್ಯನವರು ಇನ್ನು ಮೇಲಾದರೂ ಅರ್ಥ ಮಾಡಿಕೊಳ್ಳಬೇಕು ಎಂದು ಕುಟುಕಿದರು.
ಯಡಿಯೂರಪ್ಪನವರ ಮೇಲೆ ಎಫ್‌ಐಆರ್ ಆದಾಗ ಏನು ಮಾತನಾಡಿದ್ದರು. ಪ್ರಕರಣದ ವಿಚಾರಣೆ ನಡೆಯುವಾಗ ಅವರ ಕೆಳಗಿನ ಎಲ್ಲಾ ಅಧಿಕಾರಿಗಳು ಪ್ರಾಮಾಣಿಕವಾಗಿ ಹೇಗೆ ತನಿಖೆ ಮಾಡುವುದಕ್ಕೆ ಆಗುತ್ತದೆ. ಅದಕ್ಕೆ ರಾಜೀನಾಮೆ ಕೊಡಬೇಕು ಎಂದಿದ್ದ ಸಿದ್ದರಾಮಯ್ಯ ಈಗೇಕೆ ರಾಜೀನಾಮೆ ಕೊಡುತ್ತಿಲ್ಲ. ತಮ್ಮ ಆಗಿನ ಹೇಳಿಕೆ ಬಗ್ಗೆ ನೋಡಿಕೊಳ್ಳಲಿ. ಅವರು ಪ್ರವಾಸ ಮಾಡಿದಲ್ಲಿ ಬೆಲೆಯೇ ಇಲ್ಲಾ ಎಂದರು.