ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಅಗತ್ಯ; ಸಚಿವ ಸತೀಶ್ ಜಾರಕಿಹೊಳಿ
ಚಿಕ್ಕೋಡಿ: ಮಕ್ಕಳ ಆರೋಗ್ಯ ವೃದ್ಧಿಗೆ ಹಾಗೂ ಅಪೌಷ್ಟಿಕತೆ ತಡೆಗೆ ಸರಕಾರ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಶಿಕ್ಷಕರು ಅವುಗಳ ಕುರಿತು ಅರಿವು ಮೂಡಿಸಬೇಕು. ಆದಷ್ಟೂ ಮಕ್ಕಳಿಗೆ ಬಿಸಿಯೂಟ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸೂಚಿಸಿದರು.
ತಾಲೂಕಿನ ನಣದಿ ಗ್ರಾಮದ ಕೆಎಚ್ ಪಿಎಸ್ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಸೋಮವಾರ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ “ಅಜೀಂ ಪ್ರೇಮ್ ಜಿ ಫೌಂಡೇಷನ್” ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳಿಗೆ ಪೌಷ್ಠಿಕತೆ ವೃದ್ಧಿಸಲು ಎಲ್ಲಾ ಅನುದಾನಿತ ಪ್ರಾಥಮಿಕ ಹಾಗೂ ಫ್ರೌಢಶಾಲಾ ವಿಧ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳ ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು. ರಾಜ್ಯದಲ್ಲಿನ ಶಾಲಾ ಮಕ್ಕಳಿಗೆ ಇನ್ಮುಂದೆ ವಾರದ 6 ದಿನವೂ ಮೊಟ್ಟೆ ನೀಡಲಾಗುತ್ತದೆ. ಇದಕ್ಕೆ ಅಜೀಂ ಪ್ರೆಮ್‍ಜೀ ಫೌಂಡೇಷನ್ ನೆರವು ನೀಡಿದೆ ಎಂದರು.
.