Breaking News

ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

Spread the love

ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ, ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್, ಇ.ಡಿ. ಅಧಿಕಾರಿಗಳು ಸೇರಿ ಹಲವರ ವಿರುದ್ಧ ಬೆಂಗಳೂರಿನಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

 

ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಆದರ್ಶ ಅಯ್ಯರ್ ಬೆಂಗಳೂರಿನ ತಿಲಕ್​ ನಗರ ಠಾಣೆಗೆ ದೂರು ದಾಖಲಿಸಿದ್ದರು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ತಿಲಕನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿ ಮುಂದಿನ ವಿಚಾರಣೆಯ ಅ.22ಕ್ಕೆ ಮುಂದೂಡಿದೆ.

ನಳಿನ್ ಕುಮಾರ್ ಕಟೀಲು ಪರ ಕೆ.ಜಿ.ರಾಘವನ್ ವಾದ ಮಂಡಿಸಿ ಸುಲಿಗೆ ವ್ಯಾಖ್ಯಾನದ ಸನಿಹದಲ್ಲೂ ಆರೋಪ ಬರುವುದಿಲ್ಲ. ಜಾರಿ ನಿರ್ದೇಶನಾಲಯವನ್ನೂ ಆರೋಪಿಯಾಗಿಸಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದರು. ಇನ್ನು ದೂರುದಾರ ಆದರ್ಶ್ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ ಭೂಷಣ್ ವಾದ ಮಂಡಿಸಿ ಇಡಿ ಭಯದಲ್ಲಿ ರಾಜಕೀಯ ಪಕ್ಷಕ್ಕೆ ದೇಣಿಗೆ ಸಂಗ್ರಹಿಸಲಾಗಿದೆ. ಇದು ಸುಲಿಗೆ ಅಲ್ಲದೇ ಮತ್ತೇನೂ ಅಲ್ಲವೆಂದು ಹೇಳಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ