ದಾವಣಗೆರೆ: ವಿಜಯಪುರ ನಗರ ಶಾಸಕ ಬಸನಗೌಡ ಯತ್ನಾಳ್ ಅವರೇ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2 ಎ ಮೀಸಲಾತಿ ನೀಡದಂತೆ ತಡೆದವರು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ನೀಡಿರುವಂತಹ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಮುಂದಾಗಿದ್ದರು ಮಾತ್ರವಲ್ಲದೆ ಸಂಪುಟ ಸಭೆಯ ಅಜೆಂಡಾದಲ್ಲೂ ಮೀಸಲಾತಿ ಅಂಶವನ್ನು ಸೇರಿಸಿದ್ದರು. ಇದೇ ಯತ್ನಾಳ್ ಅವರೇ ಅಜೆಂಡಾದಿಂದ ಆ ವಿಷಯವನ್ನೇ ತೆಗೆಸಿದರು.
ಈಗ ಯಡಿಯೂರಪ್ಪ ವಿರುದ್ಧವೇ ಮಾತನಾಡುತ್ತಿದ್ದಾರೆ ಎಂದು ದೂರಿದರು.
ಹಾದಿ ಬೀದಿಯಲ್ಲಿ ಎಲ್ಲೆಂದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಯಡಿಯೂರಪ್ಪ ವಿರುದ್ಧ ಮಾತನಾಡುತ್ತಿದ್ದಾರೆ. ಸ್ವಯಂ ಘೋಷಿತ ನಾಯಕರಾಗಿರುವ ಯತ್ನಾಳ್ ನಾನೇ ಮುಂದಿನ ಮುಖ್ಯಮಂತ್ರಿ ಎಂಬುದಾಗಿ ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.