Breaking News

ಮುಡಾ ಹಗರಣ : 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲು

Spread the love

ಬೆಂಗಳೂರು,ಅ.1- ಮುಡಾ ಪ್ರಕರಣದಲ್ಲಿ ಮತ್ತಷ್ಟು ಆಳಕ್ಕಿಳಿದಿರುವ ಜಾರಿ ನಿರ್ದೇಶನಾಲಯ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದೆ.

ವಿಶೇಷ ಎಂದರೆ ಸೋಮವಾರವಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದು ಮಲ್ಲಿಕಾರ್ಜುನ, ಭೂ ಮಾಲೀಕ ದೇವರಾಜ್ ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಇಎಂಎಲ್‌ಎ)ಯಡಿ ದೂರು ದಾಖಲಿಸಿತ್ತು.

ಇದೀಗ ಇ.ಡಿ ಅ„ಕಾರಿಗಳು ಮುಡಾದಲ್ಲಿ ಕಾರ್ಯ ನಿರ್ವಹಿಸಿದ್ದ 18 ಅ„ಕಾರಿಗಳ ವಿರುದ್ಧ ಇಂಫೋರ್ಸ್ನಮೆಂಟ್ ಕೇಸ್ ಇನ್ಫರ್ಮೇಷನ್ ರಿಪೊರ್ಟ್ ದೂರು ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಹಿನಕಲ್ ಸರ್ವೇ ನಂಬರ್ 89ರಲ್ಲಿ ಮುಡಾದಿಂದ ನಿವೇಶನ ಹಂಚಿಕೆಯಾಗಿತ್ತು. 350ಕ್ಕೂ ಹೆಚ್ಚು ಪ್ರಭಾವಿಗಳಿಗೆ 7.18 ಎಕರೆ ಜಮೀನನ್ನು ಹಂಚಿಕೆ ಮಾಡಿದ ಆರೋಪವಿದೆ. ಇದಕ್ಕೆ ಸಂಬಂ„ಸಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂ„ಸಿದಂತೆ ಸೆ.9ರಂದು ಈ ಎಲ್ಲಾ 18 ಅ„ಕಾರಿಗಳಿಗೆ ಲೋಕಾಯುಕ್ತ ಪೊಲೀಸರ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿತ್ತು.14 ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂ„ಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸೆ.30 ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು.

ಇಡಿ ತನಿಖೆ ಮಾಡಬೇಕಿದ್ದರೆ ಮೊದಲಿಗೆ ಯಾವುದಾದರೂ ಒಂದು ತನಿಖಾ ಸಂಸ್ಥೆಯಲ್ಲಿ ಪ್ರಕರಣ ದಾಖಲಾಗಿರಬೇಕು. ಈಗ ಮೈಸೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಆಧಾರದಲ್ಲಿ ಇಡಿ ತನಿಖೆ ನಡೆಸಬಹುದಾಗಿದೆ. ಮೈಸೂರಿನಲ್ಲಿ ಬೇನಾಮಿ ಆಸ್ತಿ ಗಳಿಕೆ, ಭ್ರಷ್ಟಾಚಾರನಡೆದಿದೆ ಎಂಬ ಆರೋಪದಡಿ ತನಿಖೆ ನಡೆಸುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಹೋರಿ ತಿವಿದು ವೃದ್ಧ ಸಾವು, ಇಬ್ಬರು ಗಂಭೀರ

Spread the loveಹಾವೇರಿ: ಕೊಬ್ಬರಿ ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ಇಂದು ನಡೆಯಿತು. ಮೃತರನ್ನು 70 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ