Breaking News
Home / ಜಿಲ್ಲೆ / ಬೆಳಗಾವಿ / ಮೌಢ್ಯ ವಿರುದ್ದ ನಿರಂತರ ಹೋರಾಟ ಮಾಡುತ್ತಿರುವ ವೈಚಾರಿಕ ಚಿಂತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಮೌಢ್ಯ ವಿರುದ್ದ ನಿರಂತರ ಹೋರಾಟ ಮಾಡುತ್ತಿರುವ ವೈಚಾರಿಕ ಚಿಂತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ಮೌಢ್ಯ ವಿರುದ್ದ ನಿರಂತರ ಹೋರಾಟ ಮಾಡುತ್ತಿರುವ ವೈಚಾರಿಕ ಚಿಂತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮತ್ತೊಂದು ಹೆಜ್ಜೆ ಮುಂದಿರಿಸಿ ಹೊಸ‌ ಇತಿಹಾಸಕ್ಕೆ ನಾಂದಿ ಹಾಡಿದ್ದಾರೆ.

ಇಲ್ಲಿನ ಸದಾಶಿವ‌ ನಗರದ ಬುದ್ದ,ಬಸವ, ಅಂಬೇಡ್ಕರ್ ರುದ್ರಭೂಮಿಯಲ್ಲಿ ಸೋಮವಾರ ಸತೀಶ ಜಾರಕಿಹೊಳಿ ಅವರ ನೂತನ ಕಾರಿಗೆ ಪುಷ್ಪಾರ್ಚನೆ ಮಾಡುವ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮಕ್ಕೆ ನಾಡಿನ ಹೆಸರಾಂತ ಸ್ವಾಮೀಜಿಗಳು ಸಾಥ್ ನೀಡಿದರು.

ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್‌ ಪುತ್ರಿ ಪ್ರಿಯಾಂಕಾ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬೈಲಹೊಂಗಲ ನಿಜಗುಣಪ್ರಭು ಸ್ವಾಮೀಜಿ, ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಅಥಣಿ ಚನ್ನಬಸವ ಸ್ವಾಮೀಜಿ, ಜ್ಞಾನ ಪ್ರಕಾಶ ಸ್ವಾಮೀಜಿ, ಬಸವ ಬಳವಿ ಶರಣ ಬಸವ ದೇವರು, ಹಣಮಾಪುರ ಅಮರೇಶ್ವರ ಸ್ವಾಮೀಜಿ ಅವರು, ಸತ್ಕಾರ ಮಾಡಿದರು.

ಮಾಸ್ಕ್ ಧರಸಿ, ಸಾಮಾಜಿಕ ಅಂತರವನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರು, ಅಭಿಮಾನಿಗಳು ಭಾಗಿಯಾಗಿ ಈ ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಸ್ಮಶಾನದಲ್ಲಿಯೇ ಅಲ್ಪೋಪಹಾರ ಸೇವಿಸಿ‌ದರು.

ಸತೀಶ ಜಾರಕಿಹೊಳಿ ಅವರ ಸಂಸ್ಥಾಪಿಸಿರುವ ಮಾನವ ಬಂಧುತ್ವ ವೇದಿಕೆ ಸಂಘಟನೆ ಕಳೆದ ಹಲವಾರು ವರ್ಷಗಳಿಂದ ಮೌಢ್ಯದ ವಿರುದ್ದ ಹೋರಾಟ ಮಾಡುತ್ತಿದ್ದೆ. ಅಲ್ಲದೇ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲೊ ನಿರತವಾಗಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ