ಹುಬ್ಬಳ್ಳಿ, ಸೆ.28: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸಲು ತಂದಿದ್ದ 101 ಲ್ಯಾಪ್ಟಾಪ್ಗಳು (laptops) ಕಾರ್ಮಿಕ ಇಲಾಖೆ ಕಚೇರಿಯಿಂದಲೇಕಳ್ಳತನಆಗಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಇದಕ್ಕೆ ಕಿಡಿಕಾರಿದ್ದ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ನಿರ್ಮಾಣ ಕಾರ್ಮಿಕರ ಫೆಡರೇಶನ್, ‘ಕಾರ್ಮಿಕ ಇಲಾಖೆಯ ಅಧಿಕಾರಿಗಳ ಅಪ್ರಾಮಾಣಿಕತೆ ಮತ್ತು ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಆರೋಪಿಸಿತ್ತು. ಇದೀಗ ಘಟನೆಗೆ ಸಂಬಂಧಪಟ್ಟಂತೆ 26 ಜನ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜೊತೆಗೆ ಕಳ್ಳತನವಾಗಿದ್ದ ಲ್ಯಾಪ್ ಟಾಪ್ಗಳನ್ನು ಹಳೇ ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ‘ಕಾರ್ಮಿಕರ ಮಕ್ಕಳಿಗಾಗಿ ಇದ್ದ 101 ಲ್ಯಾಪ್ ಟಾಪ್ ಕಳುವಾಗಿದ್ದವು. ಈ ಬಗ್ಗೆ ಕಾರ್ಮಿಕ ಇಲಾಖೆ ಅಸಿಸ್ಟೆಂಟ್ ಕಮಿಷ್ನರ್ ದೂರು ನೀಡಿದ್ದರು. ಈ ಹಿನ್ನಲೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುರೇಶ ಹುಳ್ಳೂರ ತಂಡ ರಚಿಸಲಾಗಿತ್ತು. ಸೆಪ್ಟೆಂಬರ್ನಲ್ಲಿ ಬೆಳಗಾವಿಯಿಂದ ತಂದು ಕಾರ್ಮಿಕ ಇಲಾಖೆಯಲ್ಲಿ ಇಡಲಾಗಿದ್ದು, ಆಗಸ್ಟ್ನಲ್ಲಿ ಪರಿಶೀಲನೆ ಮಾಡಿದಾಗ ಅವು ಕಳುವಾಗಿದ್ದು ಬೆಳಕಿಗೆ ಬಂದಿದೆ.