Breaking News

ʼಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕ್ಷಣದಲ್ಲಾದ್ರೂ ರಾಜೀನಾಮೆʼ

Spread the love

ಬೆಂಗಳೂರು, ಅಕ್ಟೋಬರ್‌ 02: ಅಧಿಕಾರಕ್ಕಾಗಿ ತೊಡೆ ತಟ್ಟುವ ಸ್ವಪಕ್ಷೀಯರನ್ನು ಸುಮ್ಮನಾಗಿಸಲು ಸೈಟ್ ಹಿಂತಿರುಗಿಸುವ ಈ ರಾಜಕೀಯ ನಾಟಕ ಮಾಡುತ್ತಿದ್ದಾರೆ ಎಂದು ದೂರಿದರು. ಮುಖ್ಯಮಂತ್ರಿಗಳು ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು. ಇದು ಕೆಲವೇ ಗಂಟೆಗಳಲ್ಲಿ ಆದರೂ ಅಚ್ಚರಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

 

ಹೈಕೋರ್ಟ್ ತೀರ್ಪು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಬಳಿಕ ನಿನ್ನೆ ಇ.ಡಿ. ಕೇಸು ದಾಖಲಾಗಿದೆ. ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯನವರು ನಿವೇಶನ ವಾಪಸ್ ನೀಡುತ್ತಿರುವುದು ಕಾನೂನಿನ ಕುಣಿಕೆಯಿಂದ ಪಾರಾಗುವ ಉದ್ದೇಶದಿಂದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಹೇಳಿದರು.

ಸಿದ್ದರಾಮಯ್ಯನವರು ತಪ್ಪು ಮಾಡಿದ್ದನ್ನು ಅಧಿಕೃತವಾಗಿ ಒಪ್ಪಿಕೊಂಡಂತಾಗಿದೆ. 2011ರಲ್ಲಿ ಅಂದಿನ ಸಿಎಂ ಆಗಿದ್ದ ಯಡಿಯೂರಪ್ಪ ಅವರ ವಿರುದ್ಧ ಆರೋಪ ಬಂದಿತ್ತು. ಆಗ, ತಪ್ಪು ಮಾಡದಿದ್ದರೆ ಯಾಕೆ ಸೈಟ್ ಸರೆಂಡರ್ ಮಾಡಿದ್ದಾರೆ ಎಂದು ಸಿದ್ದರಾಮಯ್ಯನವರು ಪ್ರಶ್ನಿಸಿದ್ದರು ಎಂದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ