ಬೆಂಗಳೂರು,ಅ.2- ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಮೊದಲ ಬಾರಿಗೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಪ್ರಕರಣದ ಸಾಕ್ಷ್ಯಾಧಾರ ಮತ್ತು ದಾಖಲೆ ಸಲ್ಲಿಸುವಂತೆ ಇ.ಡಿ ಸಮನ್‌್ಸ ನೀಡಿದೆ.
ಈ ಮೂಲಕ ಇ.ಡಿ ಅಧಿಕೃತವಾಗಿ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದಂತಾಗಿದೆ.
ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿನಗರದಲ್ಲಿರುವ ನಿರ್ದೇಶನಾಲಯದ ಕಚೇರಿಗೆ ಮೂಡಾ ಅಕ್ರಮಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳ ಸಮೇತ ಬರುವಂತೆ ಸೂಚನೆ ನೀಡಲಾಗಿದೆ.
ಕಳೆದ ಶನಿವಾರವಷ್ಟೇ ಸ್ನೇಹಮಯಿ ಕೃಷ್ಣ ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜು ವಿರುದ್ಧ ಇ.ಡಿಗೆ ದೂರು ನೀಡಿದ್ದರು. ಸೋಮವಾರ ಇ.ಡಿ ಇಸಿಐಆರ್ ದಾಖಲಿಸಿಕೊಂಡಿದೆ.
ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಯಾದ ಜಾರಿನಿರ್ದೇಶನಾಲಯವು ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದೆ.
ಒಂದು ಕಡೆ ಲೋಕಾಯುಕ್ತ ಪೊಲೀಸರು ಈಗಾಗಲೇ ಅವರ ವಿರುದ್ದ ಎಫ್‌ಐಆರ್ ದಾಖಲಿಸಿದ್ದರೂ, ಜಾರಿ ನಿರ್ದೇಶನಾಲಯ ಸಿದ್ದರಾಮಯ್ಯ ವಿರುದ್ದ ಇಸಿಐಆರ್ ದಾಖಲಿಸಿಕೊಂಡಿದೆ.