Breaking News

ಇಡಿ, ಸಿಬಿಐ ದುರ್ಬಳಕೆ: ಮೃಣಾಲ್ ಹೆಬ್ಬಾಳಕರ್

Spread the love

ಹಿರೇಬಾಗೇವಾಡಿ: ‘ಬಿಜೆಪಿಯವರು ಇಡಿ, ಸಿಬಿಐ, ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ಸಿನ ನಿಷ್ಠಾವಂತ ಕಾರ್ಯಕರ್ತರ ಮೇಲೆ ವಿನಾಕಾರಣ ಕೇಸು ದಾಖಲಿಸುತ್ತಿದ್ದಾರೆ. ಇದು ಅವರಿಗೇ ತಿರುಗುಬಾಣ ಆಗುತ್ತಿದೆ’ ಎಂದು ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹೇಳಿದರು.

 

ಹಿರೇಬಾಗೇವಾಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರದಲ್ಲೂ ಇಡಿ, ಸಿಬಿಐಗೆ ಸಿಲುಕಿಸಲು ಯತ್ನಿಸುತ್ತಿದ್ದಾರೆ. ಈ ಹಿಂದೆ ಡಿ.ಕೆ. ಶಿವಕುಮಾರ್ ಅವರ ಮೇಲೂ ಇಡಿ, ಸಿಬಿಐ ದಾಳಿ ಮಾಡಿಸಲಾಗಿತ್ತು. ಬಲಿಷ್ಠ ನಾಯಕರನ್ನೇ ಗುರಿ ಮಾಡಲಾಗುತ್ತಿದೆ’ ಎಂದು ಕಿಡಿಕಾರಿದರು.

‘ನಮ್ಮ ಸುಭದ್ರ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಈ ಕುತಂತ್ರ ನಡೆಯುವುದಿಲ್ಲ. ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಮೂರು ಗುಂಪುಗಳಾಗಿವೆ. ಒಡೆದ ಮನೆಯವರು ಕಾಂಗ್ರೆಸ್‌ನತ್ತ ಬೆರಳು ತೋರಿಸಬಾರದು’ ಎಂದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ