Breaking News

ಉದ್ಯಮಿಗೆ ಜೀವ ಬೆದರಿಕೆ ಆರೋಪ : ಕೇಂದ್ರ ಸಚಿವ `HDK’ ವಿರುದ್ಧ `FIR’ ದಾಖಲು!

Spread the love

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ 50 ಕೋಟಿ ರೂ. ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಉದ್ಯಮಿ ವಿಜಯ್ ಟಾಟಾ ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅಮೃತ್ ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಉದ್ಯಮಿ ವಿಜಯ್ ಟಾಟಾ ಎಂಬುವರು ಬೆಂಗಳೂರಿನ ಅಮೃತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವ್ಯವಹಾರಿಕವಾಗಿ ತಾವು ಮುನ್ನಡೆ ಸಾಧಿಸಿದ್ದು, ತಮಗೆ ಕೇಂದ್ರ ಸಚಿವರು ಬೆದರಿಕೆ ಹಾಕಿದ್ದಾರೆ. ತಮಗೆ 50 ಕೋಟಿ ರೂ. ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಅದೇ ಹಣಕ್ಕಾಗಿ ಜೀವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಕೂಡ ತಮ್ಮಿಂದ ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇಬ್ಬರೂ ಜನಪ್ರತಿನಿಧಿಗಳಿಂದ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ