ಕುಂದಗೋಳ: ತಾಲ್ಲೂಕಿನ ಸಂಶಿ ಗ್ರಾಮದ ಕೆಎಲ್‌ಇ ಸಂಸ್ಥೆಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಅಂಗವಾಗಿ ಸ್ವಚ್ಛತಾ ಹಿ ಸೇವಾ ಆಂದೋಲನಕ್ಕೆ ಮಂಗಳವಾರ ಪ್ರಾಚಾರ್ಯ ಪ್ರೊ.ರಮೇಶ ಅತ್ತಿಗೇರಿ ಚಾಲನೆ ನೀಡಿದರು.

‘ವಿದ್ಯಾರ್ಥಿಗಳಿಗೆ ತಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಲು ಅವರು ಸಲಹೆ ನೀಡಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿ ಎಸ್.ಸಿ.ಅಂಗಡಿ ಮತ್ತು ಸಿಬ್ಬಂದಿ ಆರ್.ಜಿ.ಮಣಕಟ್ಟಿ, ಡಿ.ಸಿ.ಕರಿಗೇರ, ಎಸ್.ಎಸ್.ಪಾಟೀಲ, ಎ.ಎಸ್.ಕಡಕೋಳ ಹಾಗೂ ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿಗಳು ಇದ್ದರು.
Laxmi News 24×7