Breaking News

ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಕಾನೂನಿನ ಸಂಕಷ್ಟಕ್ಕೆ

Spread the love

ಬೆಂಗಳೂರು,ನ.28- ಆತ್ಮಹತ್ಯೆಗೆ ಯತ್ನಿಸಿ ಎಂ.ಎಸ್. ರಾಮಯ್ಯ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಕಾನೂನಿನ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಈಗಾಗಲೇ ಅವರ ವಿರುದ್ದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ(ಎಫ್ ಐಆರ್) ದಾಖಲಾಗಿದೆ.

ಭಾರತೀಯ ದಂಡ ಸಂಹಿತೆ 309ರ ಪ್ರಕಾರ ಆತ್ಮಹತ್ಯೆ ಯತ್ನ ಅಪರಾಧ. ಇದರ ಅಡಿಯಲ್ಲಿ ಗರಿಷ್ಠ ಒಂದು ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಬಹುದಾಗಿದೆ. ಐಪಿಸಿ ಸೆಕ್ಷನ್ 309ರ ಪ್ರಕಾರ ದೂರು ದಾಖಲಾದರೆ, ಆತ್ಮಹತ್ಯೆ ಯತ್ನಕ್ಕೆ ಕಾರಣ ಏನು ಎಂದು ಸ್ಪಷ್ಟಪಡಿಸಬೇಕಾಗುತ್ತದೆ.

ಮಾನಸಿಕ, ದೈಹಿಕ ಕಿರುಕುಳ ಅಥವಾ ಯಾರಿಂದಲಾದರೂ ಪ್ರಚೋದನೆ ಇತ್ತ ಎಂಬುದನ್ನು ಸ್ಪಷ್ಟಪಡಿಸಬೇಕಾಗುತ್ತೆ. ಇದ್ಯಾವುದು ಅಲ್ಲದೆ ಮಾನಸಿಕ ಖಿನ್ನತೆ ಅಥವಾ ಮನೋಕಾಯಿಲೆಯ ನೆಪ ನೀಡಿದರೆ, ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಕುತ್ತು ಬರುವ ಸಾಧ್ಯತೆ ಇದೆ.

ಇತ್ತೀಚೆಗೆ ಸಂತೋಷ್ ಅವರನ್ನು ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಹೊರಗಿಡುವ ಪ್ರಯತ್ನಗಳು ನಡೆದಿವೆ ಎಂಬ ಮಾತು ಕೇಳಿ ಬಂದಿತ್ತು. ನ.25ರೊಳಗೆ ಸಂತೋಷ್ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂಬ ಸಂಗತಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಇದಾದ ಮೂರೇ ದಿನದಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ