ಮೈಸೂರು: ನಂಜನಗೂಡು ತಾಲ್ಲೂಕಿನ ಇಮ್ಮಾವು ಬಳಿಯ 160 ಎಕರೆ ಪ್ರದೇಶದಲ್ಲಿ ಫಿಲಂ ಸಿಟಿಯನ್ನು (ಚಿತ್ರ ನಗರಿ) ಮೂರು ವರ್ಷಗಳಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದಸರಾ ಮಹೋತ್ಸವದ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದ್ದು ಎಂದರು.
Laxmi News 24×7