ಕಲಬುರಗಿ: ‘ಕಾಂಗ್ರೆಸ್ ಹೈಕಮಾಂಡ್ ಹಲ್ಲು ಇಲ್ಲದ ಹೈಕಮಾಂಡ್ ಆಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯಲು ಆಗುತ್ತಿಲ್ಲ’ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಟೀಕಿಸಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಂಸತ್ತಿನಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಉದ್ದುದ್ದ ಭಾಷಣ ಮಾಡುತ್ತಾರೆ.
ಬಿಜೆಪಿಯಲ್ಲಿ ಏನಾದರು ಸಣ್ಣ-ಪುಟ್ಟ ಬೆಳವಣಿಗೆ ನಡೆದರೆ ರಾಜೀನಾಮೆ ಕೇಳುತ್ತಾರೆ. ಅವರದ್ದೇ ಪಕ್ಷದ ಸಿದ್ದರಾಮಯ್ಯ ಅವರು ದೊಡ್ಡ ಹಗರಣದಲ್ಲಿ ಸಿಲುಕಿದ್ದಾರೆ. ನ್ಯಾಯಾಲಯ ಕೂಡ ತನಿಖೆಗೆ ಆದೇಶಿಸಿದೆ. ನೈತಿಕತೆ ಇದ್ದರೆ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯಲಿ’ ಎಂದರು.