Breaking News

CM ರಾಜೀನಾಮೆ ಕೇಳುವವರಿಗೆ ಚಾಮುಂಡೇಶ್ವರಿ ಒಳ್ಳೆ ಬುದ್ದಿ ಕೊಡಲಿ: ಜಿಟಿಡಿ ಟಾಂಗ್

Spread the love

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಸ್ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಜಿ.ಟಿ.ದೇವಗೌಡ, ಅವರೆಲ್ಲರಿಗೂ ದೇವಿ ಚಾಮುಂಡೇಶ್ವರಿ ಒಳ್ಳೆ ಬುದ್ಧಿ ಕೊಡಲಿ ಎಂದರು.

 

ನಾಡಹಬ್ಬ ದಸರಾ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ‌ ವಹಿಸಿ ಅವರು ಮಾತನಾಡಿದರು.

‘ಮುಡಾ ಪ್ರಕರಣದಲ್ಲಿ ಯಾರೆಲ್ಲರ‌ ವಿರುದ್ಧ ಎಫ್‌ಐಆರ್ ದಾಖಲಾಗಿದೆಯೋ‌ ಎಲ್ಲರೂ ರಾಜೀನಾಮೆ‌ ಕೊಡಲಿ’ ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಏಳುಬೀಳುಗಳನ್ನು‌ ಸ್ವಾರಸ್ಯಕರವಾಗಿ ಸ್ಮರಿಸಿ, ‘ಮೈಸೂರಿನ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಬೇಕು’ ಎಂದು ಕೋರಿದರು.

ಕಾರ್ಯಕ್ರಮದ ಕೊನೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಬೇರೆ ಪಕ್ಷದಲ್ಲಿದ್ದುಕೊಂಡೇ ಶಾಸಕ ಜಿ.ಟಿ.ದೇವೇಗೌಡರು ಸತ್ಯವನ್ನು ಹೇಳಿದ್ದಾರೆ. ಅವರು ಮುಡಾ ಸದಸ್ಯರು. ಸತ್ಯಕ್ಕೇ ಸದಾ ಜಯ. ಈ ವರ್ಷವೂ ಐದು ವರ್ಷ ಮುಖ್ಯಮಂತ್ರಿಯಾಗಿ ಅವಧಿ ಪೂರೈಸುವೆ. ಚಾಮುಂಡೇಶ್ವರಿ ಹಾಗೂ ಜನರ ಆಶೀರ್ವಾದ ಇರುವವರೆಗೂ ಯಾರೂ ಏನೂ ಮಾಡಲಾಗದು’ ಎಂದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ