Breaking News

2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

Spread the love

ಬೆಳಗಾವಿ: ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ(ಅ 3)ಹೇಳಿಕೆ ನೀಡಿದ್ದಾರೆ.

 

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ”ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ‌ ಹಾಕುವುದು ವಿಳಂಬವಾಗಿತ್ತು. ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ. ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ಣು ಮಗಳು ತುಂಬಾ ಕಿಲಾಡಿ, ಹಠ ಮಾಡಿ‌ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ‌ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದರು.

”ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆಲ್ಲಾ ಬರುತ್ತಿದ್ದು, ಹಣ ಸಿಕ್ಕ ಬಳಿಕ‌ ಭರ್ಜರಿಯಾಗಿ ಹೋಳಿಗೆ ಊಟ ಮಾಡಿ. ಅದೇ ನನಗೆ ಸಂತೋಷ” ಎಂದರು.


Spread the love

About Laxminews 24x7

Check Also

ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

Spread the love ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ