ಬೆಳಗಾವಿ: ಭ್ರಷ್ಟಾಚಾರದ ಆರೋಪಗಳನ್ನು ಹೊತ್ತ ಜನಪ್ರತಿನಿಧಿಗಳು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆಯಾಗಿದೆ. ಯಾರೂ ಈ ರೀತಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುತ್ತಿಲ್ಲ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ”ಈ ಹಿಂದೆ ಇದೇ ರೀತಿ ಆಪಾದನೆಗಳು ಬಂದಾಗ ಜನಪ್ರತಿನಿಧಿಗಳು ತತ್ ಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು. ಈಗ ಅಂತಹ ನೈತಿಕತೆ ಕಾಣುತ್ತಿಲ್ಲ. ನಮ್ಮಲ್ಲಿ ನೈತಿಕತೆಯ ಕೊರತೆ ಇದೆ” ಎಂದರು.
”ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೋ ಬೇಡವೋ ಎಂಬುದು ಅವರಿಗೆ ಬಿಟ್ಟ ವಿಚಾರ. ಆದರೆ ಈ ವಿಷಯದಲ್ಲಿ ನಮ್ಮ ಪಕ್ಷದ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಮುಡಾಗಿಂತ ವಾಲ್ಮೀಕಿ ಹಗರಣ ದೊಡ್ಡದಾಗಿದ್ದರೂ ಬಿಜೆಪಿ ಈ ವಿಷಯದಲ್ಲಿ ಮೌನವಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಇದು ತಪ್ಪು ಅಭಿಪ್ರಾಯ. ನಮ್ಮ ಹೋರಾಟದ ಫಲವಾಗಿ ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣ ಒಂದು ಹಂತಕ್ಕೆ ಬಂದಿದೆ. ತಪ್ಪಿತಸ್ಥರ ವಿಚಾರಣೆ ನಡೆಯುತ್ತಿದೆ. ಆದರೆ ಮುಡಾ ಪ್ರಕರಣದಲ್ಲಿ ಇನ್ನೂ ತನಿಖೆ ಅರಂಭವಾಗಿಲ್ಲ. ಹೀಗಾಗಿ ಈ ಹೋರಾಟಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ” ಎಂದರು.
Laxmi News 24×7