Breaking News

DCC ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ

Spread the love

ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ಏಕಾಏಕಿ ರಾಜೀನಾಮೆ ನೀಡಿದ್ದಾರೆ.

ಶುಕ್ರವಾರ ಮಧ್ಯಾಹ್ನ ಬ್ಯಾಂಕ್ ವ್ಯವಸ್ಥಾಪಕರಿಗೆ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ‌.

41 ವರ್ಷಗಳಿಂದ ರಮೇಶ ಕತ್ತಿ‌ ನಿರ್ದೇಶಕರಾಗಿ, ಆರನೇ ಬಾರಿ ಅಧ್ಯಕ್ಷರಾಗಿದ್ದರು.

 

ಬ್ಯಾಂಕಿಗೆ ಚಿಕ್ಕೋಡಿ, ನಿಪ್ಪಾಣಿ ಭಾಗದಲ್ಲಿ ಹೊಸ ಸದಸ್ಯರ ನೇಮಕ ಮಾಡಿಕೊಳ್ಳುವ ವಿಚಾರದಲ್ಲಿ ಎಲ್ಲ 14 ನಿರ್ದೇಶಕರು‌ ಅಧ್ಯಕ್ಷ ಉಮೇಶ ಕತ್ತಿ ವಿರುದ್ಧ ನಿಂತಿದ್ದರು.

ನಿರ್ದೇಶಕ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ರಮೇಶ ಅವರ ಮಧ್ಯೆ ಮುಸುಕಿನ ಗುದ್ದಾಟ ನಡೆದೇ ಇತ್ತು. ಗುರುವಾರ ನಡೆದಿದ್ದ ಸಾಮಾನ್ಯ ಸಭೆಯಲ್ಲಿ ಇದು ಸ್ಫೋಟಗೊಂಡಿತು. ಅಧ್ಯಕ್ಷರನ್ನು ಹೊರಗಿಟ್ಟೇ ಎಲ್ಲ ನಿರ್ದೇಶಕರೂ ಪ್ರತ್ಯೇಕ ಸಭೆ ನಡೆಸಿದ್ದರು. ರಮೇಶ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಗಳ ಮಧ್ಯೆಯೇ ರಮೇಶ ರಾಜೀನಾಮೆ‌ ನೀಡಿದ್ದು ಅಚ್ಚರಿಗೆ ಕಾರಣವಾಗಿದೆ.

‘ಡಿಸಿಸಿ ಬ್ಯಾಂಕಿಗೂ ತಟ್ಟಿತೇ ರಾಜಕಾರಣದ ‘ಒಳಪೆಟ್ಟು’ ಎಂಬ ವಿಶೇಷ ವರದಿ ‘ಪ್ರಜಾವಾಣಿ’ಯಲ್ಲಿ ಶುಕ್ರವಾರ ಪ್ರಕಟವಾಗಿತ್ತು.

ಕಳೆದ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸೋಲಿಗೆ ಕಾರಣರಾದರು ಎಂಬ ಕಾರಣಕ್ಕೆ ಅಣ್ಣಾಸಾಹೇಬ ಜೊಲ್ಲೆ ಅವರು ರಮೇಶ ಮೇಲೆ ಮುನಿಸಿಕೊಂಡಿದ್ದರು.


Spread the love

About Laxminews 24x7

Check Also

ಮಣ್ಣಿನ ಆರೋಗ್ಯ ಮತ್ತುನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಸಿಎಂಸಿದ್ದರಾಮಯ್ಯ ಚಾಲನೆ

Spread the loveಬೆಳಗಾವಿ: ನಮ್ಮದು ರೈತ ಪರ ಸರ್ಕಾರ. ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ