Breaking News

ಸಿಎಂ ಕುರ್ಚಿಯಲ್ಲಿ ‘ಟಗರು’ ಗಟ್ಟಿಯಾಗಿ ಕುಳಿತಿದೆ: ಯಾರೂ ಕೆಳಗಿಳಿಸಲು ಸಾಧ್ಯವಿಲ್ಲ ಎಂದ ಸಚಿವ ಜಮೀರ್ ಅಹ್ಮದ್

Spread the love

ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ವಸತಿ ಸಚಿವ ಜಮೀರ್ ಅಹ್ಮದ್, ಸದ್ಯ ಸಿಎಂ ಕುರ್ಚಿ ಖಾಲಿಯಿಲ್ಲ. 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಸಿಎಂ ಆಗಬೇಕು ಅಂತಾ ಎಲ್ಲಾ ಜಾತಿಯವರಿಗೂ ಆಸೆ ಇರುತ್ತೆ.

ದಲಿತರಿಗೆ, ಮುಸ್ಲಿಮರಿಗೆ, ಒಕ್ಕಲಿಗರಿಗೆ ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ ಇದೆ. ಆದರೆ ಈ ಐದು ವರ್ಷದ ಅವಧಿ ಸಿಎಂ ಹುದ್ದೆ ಖಾಲಿಯಿಲ್ಲ. ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂದರು.

ಸಿಎಂ ಕುರ್ಚಿಯಲ್ಲಿ ಟಗರು ಗಟ್ಟಿಯಾಗಿ ಕುಳಿತುಕೊಂಡಿದೆ. ಟಗರನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರನ್ನು ಯಾರೂ ಕೆಳಗಿಳಿಸಲ್ಲ ಎಂದು ಹೇಳಿದರು.

ಇದೇ ವೇಳೆ ಜಾತಿಗಣತಿ ಜಾರಿ ವಿಚಾರವಾಗಿ, ರಾಜ್ಯದಲ್ಲಿ ಜಾತಿಗಣತಿ ಜಾರಿಯಾಗಿಲಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಒಪ್ಪಿದರೆ ಜಾರಿಯಾಗುತ್ತದೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ