Breaking News

ಬೆಂಗಳೂರಿಗೆ ಬರ್ಬೇಕು ಅಂತ ನಟ ದರ್ಶನ್‌ ಹಠ ಹಿಡಿದಿರೋದು ಏಕೆ?

Spread the love

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಲೇ ಇದೆ. ಇದರ ನಡುವೆ ದರ್ಶನ್‌ ಹೇಗಾದರೂ ಮಾಡಿ ಬೆಂಗಳೂರಿಗೆ ವಾಪಸ್‌ ಬರಲೇಬೇಕು ಎಂದು ಹಠ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚೆಗೆ ದರ್ಶನ್‌ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ಇದೇ ಕಾರಣ ಮುಂದಿಟ್ಟುಕೊಂಡು ಬಳ್ಳಾರಿಯಿಂದ ಬೆಂಗಳೂರಿಗೆ ಮತ್ತೆ ಶಿಫ್ಟ್‌ ಆಗಲು ದರ್ಶನ್‌ ಮುಂದಾಗಿದ್ದಾರೆ.

ಮೊದಲಿಗೆ ಈ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌ ಆದ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು.

ಕೆಲವು ತಿಂಗಳು ಕಳೆದ ನಂತರ ದರ್ಶನ್‌ ಅವರಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಇದೇ ವೇಳೆ ದರ್ಶನ್‌ ಅವರು ಜಾಲಿಯಾಗಿ ರೌಡಿಶೀಟರ್‌ಗಳೊಂದಿಗೆ ಸಿಗರೇಟ್‌ ಸೇದಿಕೊಂಡು ಕುಳಿತಿದ್ದ ಫೋಟೋವೊಂದು ಎಲ್ಲೆಡೆ ವೈರಲ್‌ ಆಗಿತ್ತು.

ಈ ಘಟನೆ ಬೆನ್ನಲ್ಲೇ ದರ್ಶನ್‌ ಅವರನ್ನು ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿತ್ತು. ದರ್ಶನ್‌ಗೆ ರಾಜಾತಿಥ್ಯಕ್ಕೆ ಅವಕಾಶ ನೀಡಿದ್ದಕ್ಕೆ ಹಲವು ಜೈಲಾಧಿಕಾರಿಗಳ ಸಸ್ಪೆಂಡ್‌ ಕೂಡ ಆಗಿತ್ತು. ಆದರೆ ಬಳ್ಳಾರಿ ಜೈಲು ಸೇರಿದ್ದ ದರ್ಶನ್‌ಗೆ ಬೆಂಗಳೂರಿನಂತೆ ಎಲ್ಲ ರೀತಿಯಲ್ಲಿ ಅನುಕೂಲಗಳು ಕೂಡಿಬರಲಿಲ್ಲ


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ