Breaking News

ಊಟದಲ್ಲಿ ಹುಳು: ವಿದ್ಯಾರ್ಥಿಗಳ ಪ್ರತಿಭಟನೆ

Spread the love

ಬೆಳಗಾವಿ: ‘ತಾಲ್ಲೂಕಿನ ಮಚ್ಛೆ ಗ್ರಾಮದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ನೀಡಿದ ಊಟದಲ್ಲಿ ಹುಳು ಕಂಡುಬಂದಿವೆ’ ಎಂದು ಆರೋಪಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶನಿವಾರ ರಾತ್ರಿ ಪ್ರತಿಭಟನೆ ನಡೆಸಿದರು.

 

ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ‘ಇಲ್ಲಿ ಊಟದ ವಿಚಾರವಾಗಿ ಮಾತ್ರ ಅವ್ಯವಸ್ಥೆ ಇಲ್ಲ. ಮೂಲಸೌಕರ್ಯ ಕೊರತೆಯೂ ಇದೆ. ಅಶುಚಿತ್ವ ಹೆಚ್ಚಿದೆ’ ಎಂದು ದೂರಿದರು.

ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು, ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರಿಂದ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ