ಉಗರಗೋಳ: ‘ಯಲ್ಲಮ್ಮನಗುಡ್ಡದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಂಡಿರುವ ₹21 ಕೋಟಿ ವೆಚ್ಚದ ಕಾಮಗಾರಿಗಳನ್ನು ಅ.13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸುವರು’ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಕೈಗೊಂಡ ಕಾಮಗಾರಿಗಳನ್ನು ಶನಿವಾರ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಇಲಾಖೆ ನಿರ್ದೇಶಕ ಕೆ.ವಿ.ರಾಜೇಂದ್ರ, ‘ಸುಲಭ ಶೌಚಗೃಹ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲು ಮತ್ತು ನಿರ್ವಹಣೆಗಾಗಿ ಯಲ್ಲಮ್ಮ ದೇವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರಿಸಲು ಅಧಿಕಾರಿಗಳು ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.
Laxmi News 24×7