ಬೆಳಗಾವಿ: ಹಳೆ ದ್ವೇಷ ಹಿನ್ನೆಲೆಯಲ್ಲಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ (Hindalga Central Jail) ಕೈದಿಯೋರ್ವನ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ರಾಮತೀರ್ಥ ನಗರ ನಿವಾಸಿ ನಿತೇಶಕುಮಾರ ಚವ್ಹಾಣ ಎಂಬ ವಿಚಾರಣಾಧೀನ ಕೈದಿ ಮೇಲೆ ಹಳೆ ದ್ವೇಷದಿಂದಾಗಿ ಶುಕ್ರವಾರ ಹಲ್ಲೆ ನಡೆಸಿದ್ದಾರೆ.
ಹಲ್ಲೆಗೊಳಗಾದ ನಿತೇಶ್ ಕುಮಾರ್ ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುತ್ತ್ಯಾನಟ್ಟಿಯ ವಿಚಾರಣಾದೀನ ಕೈದಿಗಳಾದ ಬಸವರಾಜ ಹೊಳೆಪ್ಪ ದಡ್ಡಿ, ಬಸವಣ್ಣಿ ಸಿದ್ದಪ್ಪ ನಾಯಿಕ, ಸವೆನಾ ಸಿದ್ದಪ್ಪ ದಡ್ಡಿ ಹಾಗೂ ಪ್ರಧಾನಿ ಶೇಖರ ವಾಘಮೋಡೆ ಎಂಬಾತರು ಹಲ್ಲೆ ಮಾಡಿದ್ದಾರೆ.
ಆರೋಪಿಗಳ ಸಂಬಂಧಿಕನ ಮೇಲೆ ಹಲ್ಲೆ ಮಾಡಿದ್ದ ಎಂಬ ಕಾರಣಕ್ಕೆ ಎಲ್ಲರೂ ಸೇರಿ ಈತನ ಮೇಲೆ ಹಲ್ಲೆ ನಡೆಸಿದ್ದಾರೆ ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7