ಚಿತ್ರದುರ್ಗ: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘರಾಜೇಂದ್ರ ಮಠದ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಜಾಮೀನು ಮಂಜೂರರಾಗಿದೆ.
ಜೈಲಿನಿಂದ ಮುರುಘಾ ಶ್ರೀ ಬಿಡುಗಡೆಗೆ ಕೋರ್ಟ್ ಆದೇಶ ನೀಡಿದ್ದು, ಜೈಲಿನಿಂದ ಬಿಡುಗಡೆ ಬಳಿಕ ದಾವಣಗೆರೆ ವಿರಕ್ತ ಮಠಕ್ಕೆ ತೆರಳಲಿದ್ದಾರೆ.
ಪೋಕ್ಸೊ ಪ್ರಕರಣದಲ್ಲಿ ಬಾಲಕಿಯರ ವಿಚಾರಣೆ ಬಳಿಕ ಜಾಮೀನು ನೀಡಲು ಈ ಹಿಂದೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಸೋಮವಾರ (ಅ.07) ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
Laxmi News 24×7