Breaking News

ದರೋಡೆಗೆ ಯತ್ನ. ಪೊಲೀಸರಿಂದ ಓರ್ವನ ಕಾಲಿಗೆ ಗುಂಡು

Spread the love

ಹುಬ್ಬಳ್ಳಿ: ದರೋಡೆಗೆ ಯತ್ನಿಸಿದ ತಂಡದ ಮೇಲೆ ಪೊಲೀಸರು ಗುಂಡಿನ‌ ದಾಳಿ‌ ನಡಸಿದ್ದು, ಒಬ್ಬ ದರೋಡಕೋರನ ಕಾಲಿಗೆ ಗುಂಡು ತಗುಲಿದ ಘಟನೆ ರೇವಡಿಹಾಳ ಸೇತುವೆ ಬಳಿ ಸೋಮವಾರ ಬೆಳಗಿನ ಜಾವ ನಡೆದಿದೆ.

ಸೋಮವಾರ ಬೆಳಗಿನ‌ ಜಾವ 3:00 ಗಂಟೆ ಸುಮಾರಿಗೆ ಗೋಕುಲ ಗ್ರಾಮದಲ್ಲಿ 5-6 ಜನರ ತಂಡವು ರಜನಿಕಾಂತ ದೊಡ್ಡಮನಿ ಎಂಬುವರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದೆ.

ಈ ವೇಳೆ ಮನೆಯವರು ಎಚ್ಚರಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಗೋಕುಲ ರೋಡ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ದರೋಡೆಕೋರರನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಮುಂದಾದಾಗ ಪಿಎಸ್‌ಐ ಸಚಿನ ದಾಸರೆಡ್ಡಿ ಮೊದಲು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ನಂತರ ಮಹೇಶ ಕಾಳೆ ಎಂಬ ದರೋಡೆಕೋರನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಇನ್ನುಳಿದ ದರೋಡೆಕೋರರು ತಲೆಮರೆಸಿಕೊಂಡು ಹೋಗಿದ್ದಾರೆ. ಈ ವೇಳೆ ಪಿಎಸ್‌ಐ ಸಚಿನ ದಾಸರೆಡ್ಡಿ ಮತ್ತು ಹೆಡ್ ಕಾನ್ಸಟೇಬಲ್ ವಸಂತ ಗುಡಗೇರಿ ಅವರು ಗಾಯಗೊಂಡಿದ್ದಾರೆ. ಗುಂಡೇಟು ತಿಂದ ದರೋಡೆಕೋರ ಮತ್ತು ಪೊಲೀಸರು ಸೇರಿ ಮೂವರು ಗಾಯಾಳುಗಳು ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ತಂಡವು ಕೆಲ ದಿನಗಳಿಂದ ಗೋಕುಲದಲ್ಲಿ 2-3 ಮನೆಗಳಲ್ಲಿ ದರೋಡೆ ಮಾಡಿತ್ತು. ನಿನ್ನೆಯೂ ಸಹ ಓರ್ವರ ಮನೆಗೆ ನುಗ್ಗಿ ದರೋಡೆ ಮಾಡಲು ಮುಂದಾಗಿದ್ದಾಗ ಅವರ ಮೇಲೆ ದಾಳಿ ಮಾಡಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ