Breaking News

ಗ್ರಾಮಸಭೆ ಕಡ್ಡಾಯ :ಪ್ರಿಯಾಂಕ್‌ ಖರ್ಗೆ

Spread the love

ಬೆಂಗಳೂರು: ಗ್ರಾಮ ಪಂಚಾಯತ್‌ಗಳಲ್ಲಿ ಜನವಸತಿ ಸಭೆ, ವಾರ್ಡ್‌ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾ ಯತ್‌ ರಾಜ್‌ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್‌ ರಾಜ್‌ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾ.ಪಂ.ಗಳು ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಗ್ರಾಮಸಭೆ ಸೇರುವ ಒಂದು ತಿಂಗಳು ಮೊದಲೇ ಜನವಸತಿ ಸಭೆ ಹಾಗೂ ವಾರ್ಡ್‌ ಸಭೆಗಳನ್ನು ಗ್ರಾ.ಪಂ.

ಅಧ್ಯಕ್ಷರು ನಡೆಸಬೇಕು. ಒಂದು ವರ್ಷದಲ್ಲಿ 2 ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಪ್ರತೀ ಆರ್ಥಿಕ ವರ್ಷದಲ್ಲಿ ಜನವರಿ ತಿಂಗಳ 26, ಎಪ್ರಿಲ್‌ನಲ್ಲಿ 24, ಆಗಸ್ಟ್‌ನಲ್ಲಿ 15 ಮತ್ತು ಅಕ್ಟೋಬರ್‌ 2ರಂದು ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ಆಯೋಜಿಸಬೇಕು. 1 ವರ್ಷದಲ್ಲಿ 1 ವಿಶೇಷ ಮಹಿಳಾ ಗ್ರಾಮಸಭೆ ಮತ್ತು 1 ಮಕ್ಕಳ ಗ್ರಾಮ ಸಭೆಯನ್ನು ಆಯೋಜಿಸಲು ಮಾರ್ಗದರ್ಶನ ನೀಡಲಾಗಿದೆ ಎಂದೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ

Spread the loveಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ