Breaking News

ಮ್ಮು&ಕಾಶ್ಮೀರ ವಿಧಾನಸಭೆ ಚುನಾವಣೆ ಫಲಿತಾಂಶ : ಬಿಜೆಪಿಗೆ ಭರ್ಜರಿ ಮುನ್ನಡೆ

Spread the love

ವದೆಹಲಿ : ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಜಮ್ಮು& ಕಾಶ್ಮೀರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ.

ಜಮ್ಮು& ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಮೈತ್ರಿ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

 

ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಸ್ಥಾನಗಳಿದ್ದು, ಅದರಲ್ಲಿ 47 ಕಾಶ್ಮೀರದಲ್ಲಿ ಮತ್ತು 43 ಜಮ್ಮುವಿನಲ್ಲಿವೆ. ಇಲ್ಲಿ ಮೊದಲ ಹಂತದ ಮತದಾನ ಸೆಪ್ಟೆಂಬರ್ 18 ರಂದು ಮತ್ತು ಎರಡನೇ ಹಂತದ ಮತದಾನ ಸೆಪ್ಟೆಂಬರ್ 25 ರಂದು ನಡೆಯಿತು. ಆರ್ಟಿಕಲ್ 370 ರದ್ದಾದ ನಂತರ ಇಲ್ಲಿ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ. ಅಕ್ಟೋಬರ್ 6 ರಂದು ಸಮೀಕ್ಷೆಗಳು ಬಿಡುಗಡೆಯಾಗಿದ್ದು, ಇಲ್ಲಿ ಎನ್‌ಸಿ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಾಗಲಿದೆ. ಆದರೆ, ಇಲ್ಲಿ ಯಾವ ಪಕ್ಷ ಸಿಎಂ ಆಗಲಿದೆ ಎಂಬುದು ಕೂಡ ಕೆಲವೇ ಗಂಟೆಗಳಲ್ಲಿ ಸ್ಪಷ್ಟವಾಗಲಿದೆ


Spread the love

About Laxminews 24x7

Check Also

ಹೋರಿ ತಿವಿದು ವೃದ್ಧ ಸಾವು, ಇಬ್ಬರು ಗಂಭೀರ

Spread the loveಹಾವೇರಿ: ಕೊಬ್ಬರಿ ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ಇಂದು ನಡೆಯಿತು. ಮೃತರನ್ನು 70 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ