ಬೆಂಗಳೂರು,ಅ.8-ರಾಜ್ಯದ ಹೆದ್ದಾರಿಗಳಲ್ಲಿನ ಚೆಕ್ ಪೋಸ್ಟ್‌ಗಳಲ್ಲಿ ಲಂಚ ದಂಧೆಯನ್ನು ಬಯಲಿಗೆಳೆಯಲು ಬೀದರ್, ಕೋಲಾರ, ಬಳ್ಳಾರಿ, ಚಿಕ್ಕೋಡಿ ಹಾಗೂ ವಿಜಯಪುರ ಆರ್‌ಟಿಓ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಾಹನಗಳ ಸವಾರರಿಂದ ಹಣ ವಸೂಲಿ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತಾ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಬೀದರ್‌ನ ಆರ್‌ಟಿಒ ಕಚೇರಿ ಸಿಬ್ಬಂಧಿಗಳಿಗೂ ಶಾಕ್ ನೀಡಿದ್ದಾರೆ.
ಇದಲ್ಲದೆ ತಾಲೂಕಿನ ಮೊಳಕೇರಾ ಬಳಿ ಇರುವ ಆರ್‌ಟಿಒ ಚೆಕ್ ಪೋಸ್ಟ್ ಮೇಲೆ ಮುಂಜಾನೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗೂಡ್‌್ಸ ವಾಹನಗಳಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಲೋಕಾಯುಕ್ತ ಎಸ್‌ಪಿ ಬಿ.ಕೆ.ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ.
ಇನ್ನು ಬಳ್ಳಾರಿ ತಾಲೂಕಿನ ಪಿಡಿ ಹಳ್ಳಿ ಆರ್ ಟಿಓ ಚೆಕ್‌ಪೋಸ್ಟ್ ಮೇಲೆ ಮಧ್ಯರಾತ್ರಿ 2 ಗಂಟೆಗೆ ಸಂದರ್ಭದಲ್ಲಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆಸಿ. ಲಕ್ಷಾಂತರ ರೂ ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಪರಿಶೀಲನಾ ಕಾರ್ಯ ಮುಂದುವರೆದಿದೆ.
ಕೋಲಾರ ಚೆಕ್ ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಚೆಕ್ ಪೋಸ್ಟ್ ಮೇಲೆ ದಾಳಿ ಮಾಡಲಾಗಿದೆ, ಅಲ್ಲದೆ ಮುಳಬಾಗಿಲು ತಾಲೂಕಿನ ನಂಗಲಿ ಚೆಕ್ ಪೋಸ್ಟ್ ಮೇಲೂ ದಾಳಿ ನಡೆದಿದೆ. ಈ ಎರಡು ಚೆಕ್ ಪೋಸ್ಟ್ ಗಳಲ್ಲಿ ದಾಖಲೆಗಿಂತ ಅಧಿಕ ಹಣ ಪತ್ತೆಯಾಗಿದ್ದು, ಅಧಿಕಾರಿಗಳು ತನಿಖೆಯನ್ನು ಮುಂದುವರೆಸಿದ್ದಾರೆ.