ನವದೆಹಲಿ, ಅಕ್ಟೋಬರ್ 08: ಹರಿಯಾಣ ವಿಧಾನಸಭೆ ಚುನಾವಣೆ 2024ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 90 ಸದಸ್ಯ ಬಲದ ವಿಧಾನಸಭೆಗೆ ಒಂದೇ ಹಂತದಲ್ಲಿ ಅಕ್ಟೋಬರ್ 5ರ ಶನಿವಾರ ಮತದಾನ ನಡೆದಿತ್ತು. ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್ ಅಧಿಕಾರ ಹಿಡಿಯಲಿವೆ ಎಂದು ಅಂದಾಜಿಸಿತ್ತು.
ಆದರೆ ಮಂಗಳವಾರ ನಡೆದ ಮತ ಎಣಿಕೆಯ ಬಳಿಕ ಬೇರೆಯ ಫಲಿತಾಂಶ ಬಂದಿದೆ. ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಅಘಾತ ಉಂಟು ಮಾಡಿದೆ. ಬಿಜೆಪಿ ರಾಜ್ಯದಲ್ಲಿ 3ನೇ ಬಾರಿಗೆ ಸರ್ಕಾರ ರಚನೆ ಮಾಡಲಿದೆ.
ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 46. 3.45ರ ಬಿಜೆಪಿ 50, ಕಾಂಗ್ರೆಸ್ 35, ಐಎನ್‌ಎಲ್‌ಡಿ 2, ಇತರರು 3 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಕೇಂದ್ರ ಚುನಾವಣಾ ಆಯೋಗದ ಮಾಹಿತಿಯಂತೆ ಬಿಜೆಪಿ 17, ಕಾಂಗ್ರೆಸ್ 15, ಇತರರು 2 ಸ್ಥಾನಗಳಲ್ಲಿ ಜಯಗಳಿಸಿದ್ದು 90ರ ಪೈಕಿ 34 ಕ್ಷೇತ್ರದ ಫಲಿತಾಂಶ ಘೋಷಣೆಯಾಗಿದೆ.
Laxmi News 24×7