ಚಂಡೀಗಢ: ಕಾಂಗ್ರೆಸ್ ಅಭ್ಯರ್ಥಿ, ಕುಸ್ತಿಪಟು ವಿನೇಶ್ ಫೋಗಟ್ ಅವರು ತಮ್ಮ ಚೊಚ್ಚಲ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಹರಿಯಾಣದ ಜುಲಾನಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಫೋಗಟ್, ಬಿಜೆಪಿ ಅಭ್ಯರ್ಥಿ ಯೋಗೀಶ್ ಕುಮಾರ್ ಅವರನ್ನು 6,015 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಮತ ಎಣಿಕೆ ಉದ್ದಕ್ಕೂ ಯೋಗೀಶ್ ಮತ್ತು ಫೋಗಟ್ ಅವರ ನಡುವೆ ನಿಕಟ ಪೈಪೋಟಿ ಏರ್ಪಟ್ಟಿದ್ದು, ಆರಂಭದಲ್ಲಿ ಫೋಗಟ್ ಅವರು ಅಲ್ಪ ಹಿನ್ನಡೆ ಅನುಭವಿಸಿದ್ದರು.
ಪ್ಯಾರಿಸ್ ಒಲಿಂಪಿಕ್ಸ್ ಮಹಿಳೆಯರ 50 ಕೆ.ಜಿ ವಿಭಾಗದಲ್ಲಿ ಫೈನಲ್ ತಲುಪಿದ್ದ ಫೋಗಟ್ ಅವರು 100 ಗ್ರಾಂ ಹೆಚ್ಚು ತೂಕ ಹೊಂದಿದ್ದಾರೆ ಎಂಬ ಕಾರಣಕ್ಕೆ ಅನರ್ಹಗೊಂಡಿದ್ದರು. ಇದಾದ ಬೆನ್ನಲ್ಲೇ ರಾಜಕೀಯದತ್ತ ಮುಖ ಮಾಡಿದ್ದ ಅವರು, ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
Laxmi News 24×7