ಬೆಳಗಾವಿ: ‘ಮುಂದಿನ ವರ್ಷ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಡೆಯಲಿದೆ. ಎಲ್ಲರೂ ಸಿದ್ದತೆ ನಡೆಸಿದ್ದಾರೆ. ನಾವೂ ಸಿದ್ಧತೆ ಮಾಡಿಕೊಂಡಿದ್ದೇವೆ…’
ಮಹಿಳಾ ಮತ್ತು ಮತ್ತು ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಈ ಮಾತು ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಹೊಸ ಗಾಳಿ ಬೀಸುವಂತೆ ಮಾಡಿದೆ.
ತಮ್ಮ ಎರಡು ದಶಕಗಳ ರಾಜಕಾರಣದಲ್ಲಿ ಲಕ್ಷ್ಮಿ ಹೆಬ್ಬಾಳಕರ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಮಾತ್ರ ಕ್ರಿಯಾಶೀಲವಾಗಿದ್ದಾರೆ. ಒಂದು ಬಾರಿ ವಿಧಾನಸಭೆಯಲ್ಲಿ ಸೋಲುಂಡ ಅವರು, ಎರಡನೇ ಬಾರಿಗೆ ಆಯ್ಕೆಯಾಗಿ ಸಚಿವ ಸ್ಥಾನ ಅಲಂಕರಿಸಿದ್ದಾರೆ. ಸಹೋದರ ಚನ್ನರಾಜ ಹಟ್ಟಿಹೊಳಿ ಅವರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಅವರ ಪುತ್ರ ಮೃಣಾಲ್ ಸೋಲುಂಡಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಸ್ವತಃ ಲಕ್ಷ್ಮಿ ಅವರು ಸುರೇಶ ಅಂಗಡಿ ವಿರುದ್ಧ ಸೋಲುಂಡಿದ್ದರು.
ರಾಜಕೀಯ ಹೊರತಾಗಿ, ಸಕ್ಕರೆ ಕಾರ್ಖಾನೆ ಮತ್ತಿತರ ಉದ್ಯಮಗಳಲ್ಲೂ ಹೆಬ್ಬಾಳಕರ ಕುಟುಂಬ ತೊಡಗಿಕೊಂಡಿದೆ. ಆದರೆ, ಇದೇ ಮೊದಲಬಾರಿಗೆ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಗೂ ಸಿದ್ಧರಾಗುತ್ತಿದ್ದಾರೆ ಎಂಬುದು ಅವರ ಆಪ್ತವಲಯದ ಮಾತು.
Laxmi News 24×7