ಮುಳಬಾಗಿಲು: ತಾಲ್ಲೂಕಿನ ನಂಗಲಿ ಆರ್‌ಟಿಒ ಕಚೇರಿ ಮೇಲೆ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದರು.
ಬೆಂಗಳೂರು ಲೋಕಾಯುಕ್ತ ಡಿವೈಎಸ್‌ಪಿ ಪ್ರದೀಪ್ ನೇತೃತ್ವದಲ್ಲಿ 13 ಅಧಿಕಾರಿಗಳ ತಂಡವು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿತು.
ಒಟ್ಟು ₹10 ಸಾವಿರ ವಸೂಲಿಯಾಗಿದ್ದರೆ, ಲೆಕ್ಕವಿಲ್ಲದ ₹24,500 ಅನ್ನು ಅಧಿಕಾರಿಗಳು ವಶಕ್ಕೆ ಪಡೆದರು.
ನಂಗಲಿ ಆರ್‌ಟಿಒ ಕಚೇರಿಯಲ್ಲಿ ಸಾರ್ವಜನಿಕರು ಮತ್ತು ವಾಹನ ಸವಾರರಿಂದ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂಬ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಯಾವುದೇ ಮುನ್ಸೂಚನೆ ನೀಡದೆ, ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.