Breaking News

ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ ‘FIR’ ದಾಖಲು!

Spread the love

ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ ‘FIR’ ದಾಖಲು!

ಬೆಂಗಳೂರು : ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ರೈತ ಮುಖಂಡೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಮಹಿಳೆ ಇಂದು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

 

ಹೌದು ರೈತ ಮುಖಂಡ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮೇಲೆ FIR ದಾಖಲಾಗಿದೆ. ದೂರಿನಲ್ಲಿ ಸಂತ್ರಸ್ತೆ ಮಹಿಳೆ ಶಾಸಕ ವಿನಯ್ ಕುಲಕರ್ಣಿ ಅವರು 2022 ರಿಂದ ನನಗೆ ಪರಿಚಯ. ಆಗಾಗ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ಬಳಸಿಕೊಳ್ಳುತ್ತಿದ್ದರು. ವಿಡಿಯೋ ಕಾಲ್‌ನಲ್ಲಿ ಸಂಪೂರ್ಣ ಬೆತ್ತಲೆಯಾಗಿ ನನ್ನನ್ನು ನೋಡು ಎನ್ನುತ್ತಿದ್ದರು. 2022ರ ಆಗಸ್ಟ್‌ 24 ರಂದು ಸಂಜೆ 4 ಗಂಟೆಗೆ ಆಟೋದಲ್ಲಿ ಅವರ ಮನೆಗೆ ಹೋಗಿದ್ದೆ.

ಬಳಿಕ ಮನೆಯಿಂದ ಕಾರ್‌ನಲ್ಲಿ ಬಂದ ವಿನಯ್‌ ಕುಲಕರ್ಣಿ ನನಗೆ ಕುಳಿತುಕೊಳ್ಳುವಂತೆ ಹೇಳಿ, ದೇವನಹಳ್ಳಿ ಸಮೀಪದ ಐವಿಸಿ ರೋಡ್‌ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದರು. ಕತ್ತಲೆ ಆದ ನಂತರ ಹಿಂದಿನ ಸೀಟ್‌ನಲ್ಲಿ ನನ್ನ ಹತ್ತಿರ ಕುಳಿತು ಅಸಭ್ಯ ವರ್ತನೆ ತೋರಿದ್ದಲ್ಲದೆ, ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ.ಬಳಿಕ ಅಕ್ಟೋಬರ್‌ 2 ರಂದು ಗಾಂಧಿ ಜಯಂತಿಯಂದೂ ತಮ್ಮ ಮೇಲೆ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ