Breaking News

ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ: ಬಿ.ವೈ. ವಿಜಯೇಂದ್ರ

Spread the love

ಹುಬ್ಬಳ್ಳಿ: ಮುಂದಿನ ಸಿಎಂ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವವರೇ ಡಿಸಿಎಂ ಡಿ.ಕೆ. ಶಿವಕುಮಾರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಲವರು ಸಿದ್ದರಾಮಯ್ಯ ಅವರು ಮುಂದಿನ ಐದು ವರ್ಷಗಳ ಕಾಲ ಇರುತ್ತಾರೆ ಎನ್ನುವವರೇ ಸಿಎಂ ಆಕಾಂಕ್ಷಿಗಳಾಗಿದ್ದಾರೆ.

ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ ಎಂದರು.

ಸಿಎಂ ಹಗರಣಗಳ ಸರಮಾಲೆಯಲ್ಲಿ ಸಿಲುಕಿದ್ದು, ಇದರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಜಾತಿ ಗಣತಿ ಎಂದ ದಾಳ ಉರುಳಿಸಿದ್ದಾರೆ ಎಂದು ಟೀಕಿಸಿದರು.

ಪಕ್ಷದ ಹೈಕಮಾಂಡ್‌ಗೆ ಮಂಕು ಬೂದಿ ಎರಚಿ ರಾಜ್ಯಾಧ್ಯಕ್ಷರಾಗಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಿಂದ ಹೊರಗೆ ಹೋದವರು ಈ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದರು.

ರಾಯಣ್ಣ ಚನ್ನಮ್ಮ ಬ್ರಿಗೇಡ್ ಬಗ್ಗೆ ನಾನು ಏನನ್ನು ಹೇಳಲು ಸಿದ್ಧವಿಲ್ಲ.‌ ಅದು 20-20 ಮ್ಯಾಚ್ ಇದ್ದ ಹಾಗೆ. ನಾನು ಟೆಸ್ಟ್ ಆಡಲು ಬಂದಿದ್ದೇನೆ. ಪಕ್ಷದ ಹಿರಿಯರ ಹೇಳಿಕೆಗಳಿಕೆ ಪ್ರತಿಕ್ರಿಯಿಸಲ್ಲ. ನಾನು ನಾಯಕನಾಗಿ ಬಂದಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಬಂದಿದ್ದೇನೆ ಎಂದರು.


Spread the love

About Laxminews 24x7

Check Also

ಪಟಾಕಿ ತಾಗಿದ್ದಕ್ಕೆ ಸಿಡಿಮಿಡಿ; ಮಾರಕಾಸ್ತ್ರಗಳಿಂದ ಇಬ್ಬರ ಮೇಲೆ ಹಲ್ಲೆ

Spread the loveಬೆಂಗಳೂರು: ಪಟಾಕಿ ಕಿಡಿ ತಾಗಿದ್ದಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ