ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಅವರ ಆರೋಗ್ಯ ಏರುಪೇರಾಗಿರುವ ಬಗ್ಗೆ ವರದಿಗಳು ಬಂದಿದ್ದವು.
ಆದರೆ, ಸೋಷಿಯಲ್ ಮೀಡಿಯಾದ ಮೂಲಕ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ಆದರೆ, ಇದೀಗ ಅವರ ಆರೋಗ್ಯ ಕ್ಷಿಣಿಸುತ್ತಿರುವ ಬಗ್ಗೆ ವರದಿಯಾಗಿದೆ.
ರತನ್ ಟಾಟಾ ಅವರ ಆರೋಗ್ಯ ಕ್ಷೀಣಿಸುತ್ತಿರುವ ಬಗ್ಗೆ ಇತ್ತೀಚಿನ ದಿನಗಳಲ್ಲಿ ವರದಿಯಾಗುತ್ತಲ್ಲೇ ಇದೆ. ಆದರೆ, ಕಳೆದ ಮೂರು ದಿನಗಳಿಂದ ಅವರ ಆರೋಗ್ಯದಲ್ಲಿ ಭಾರೀ ಏರುಪೇರಾಗಿರುವುದು ವರದಿಯಾಗುತ್ತಿದೆ. ಇದೀಗ ಅವರಿಗೆ ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಬೈನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ. ಈಚೆಗೆ ಅವರು ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ವಯೋಸಹಜ ಸಮಸ್ಯೆ ಮತ್ತು ಸಾಮಾನ್ಯ ಆರೋಗ್ಯ ತಪಾಸಣೆ ಎಂದಷ್ಟೇ ಹೇಳಲಾಗಿತ್ತು. ಆದರೆ, ಇದೀಗ ಅವರ ಆರೋಗ್ಯದಲ್ಲಿ ಭಾರೀ ಏರುಪೇರಾಗುತ್ತಿದೆ ಎಂದು ಹೇಳಲಾಗುತ್ತಿದೆ.