ಹುಬ್ಬಳ್ಳಿ: ‘ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇರುವವರೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ ಅವಧಿ ಪೂರ್ಣಗೊಳಿಸುವರು ಎಂದು ಹೇಳುವವರೇ ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ.
ಅವರಲ್ಲಿ ಡಿ.ಕೆ.ಶಿವಕುಮಾರ್ ಮೊದಲಿಗರು’ ಎಂದರು.
‘ಸಿದ್ದರಾಮಯ್ಯ ಅವರು ಸೂಚಿಸುವ ವ್ಯಕ್ತಿಗಳೇ ಸಹಜವಾಗಿ ಮುಖ್ಯಮಂತ್ರಿಯಾಗುತ್ತಾರೆ. ಹೀಗಾಗಿ ಅವರನ್ನು ಓಲೈಸಿಕೊಳ್ಳಲು ಪದೇ ಪದೇ ಅನಿವಾರ್ಯವಾಗಿ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಅವಧಿಯನ್ನು ಪೂರ್ಣಗೊಳಿಸುತ್ತಾರೆ ಎಂದು ಹೇಳುತ್ತಿದ್ದಾರೆ. ಆದರೆ, ದಸರಾ ನಂತರ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ’ ಎಂದು ಹೇಳಿದರು.
Laxmi News 24×7