Breaking News

ಚರ್ಚ್‌ನಲ್ಲಿ ಆಯುಧ ಪೂಜೆ ಮಾಡಿ ಗಮನ ಸೆಳೆದ ಕ್ರೈಸ್ತರು

Spread the love

ಚಾಮರಾಜನಗರ, ಅಕ್ಟೋಬರ್‌, 11: ಇಂದು (ಅಕ್ಟೋಬರ್‌ 11) ಆಯುಧ ಪೂಜಾ ಕಾರ್ಯಗಳು ನಡೆಯುತ್ತಿವೆ. ಮತ್ತೊಂದೆಡೆ ಕ್ರೈಸ್ತ ಸಮುದಾಯದವರು ಹಿಂದೂಗಳ ಪವಿತ್ರ ಆಚರಣೆಯಾದ ಆಯುಧ ಪೂಜೆಯನ್ನು ಮಾಡುವ ಮೂಲಕ ಗಮನ ಸೆಳೆದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ನಡೆದಿದೆ.

ಹನೂರು: ಚರ್ಚ್‌ನಲ್ಲಿ ಆಯುಧ ಪೂಜೆ ಮಾಡಿ ಗಮನ ಸೆಳೆದ ಕ್ರೈಸ್ತರು

ಮಾರ್ಟಳ್ಳಿ ಗ್ರಾಮದಲ್ಲಿ ಕ್ರೈಸ್ತ ಸಮುದಾಯವರೇ ಅಧಿಕ ಸಂಖ್ಯೆಯಲ್ಲಿದ್ದು, ಇಂದು ವಾಹನಗಳನ್ನು ಶುಚಿಗೊಳಿಸಿ, ಅಲಂಕೃತಗೊಳಿಸಿ ಚರ್ಚ್‌ಗೆ ಕೊಂಡೊಯ್ದು ಆಯುಧ ಪೂಜೆ ನೆರವೇರಿಸಿದ್ದಾರೆ. ಅಲ್ಲಿನ ಪಾದ್ರಿ ಸಗಾಯ್ ರಾಜ್ ಪ್ರಾರ್ಥನೆ, ಶುಭ ಸಂದೇಶ ತಿಳಿಸಿ ಪವಿತ್ರ ಜಲವನ್ನು ನೂರಾರು ವಾಹನಗಳಿಗೆ ಪ್ರೋಕ್ಷಣೆ ಮಾಡಿ ಯಾವುದೇ ಅಪಘಾತಗಳಾಗದಿರಲಿ, ಶುಭ-ಲಾಭ ತರಲಿ ಎಂದು ಹಾರೈಸಿದರು‌.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ