ಹಾಸನ: ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲೆಯನ್ನು ಲಾಕ್‍ಡೌನ್ ಮಾಡಿ ಎಂದು ಎಂಎಲ್‍ಸಿ ಗೋಪಾಲಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಜಿಲ್ಲೆಯನ್ನು ಈಗಾಗಲೇ ಜನರೇ ಸ್ವಯಂಪ್ರೇರಿತವಾಗಿ ಭಾಗಶಃ ಲಾಕ್‍ಡೌನ್ ಮಾಡಿದ್ದಾರೆ. ಚನ್ನರಾಯಪಟ್ಟಣ ತಾಲೂಕನ್ನು 14 ದಿನಗಳ ಕಾಲ ಸ್ವಯಂಪ್ರೇರಿತವಾಗಿ ಸಂಪೂರ್ಣ ಲಾಕ್‍ಡೌನ್ ಮಾಡಿ ಈಗಾಗಲೇ ಒಂದು ವಾರ ಕಳೆದಿದೆ. ಅಂದಿನಿಂದ ತಾಲೂಕಿನಲ್ಲಿ ಸೋಂಕು ಹರಡುತ್ತಿರುವ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ.
ಚನ್ನರಾಯಪಟ್ಟಣದಂತೆಯೇ ಜಿಲ್ಲೆಯ ಅರಸೀಕೆರೆ, ಸಕಲೇಶಪುರ, ಹಾಸನ, ಹೊಳೆನರಸೀಪುರ ತಾಲೂಕುಗಳಲ್ಲೂ ಮಧ್ಯಾಹ್ನದ ನಂತರ ಜನರೇ ಸ್ವಯಂ ಪ್ರೇರಿತವಾಗಿ ಲಾಕ್‍ಡೌನ್ ಮಾಡುತ್ತಿದ್ದಾರೆ. ಹೀಗಾಗಿ ಸರ್ಕಾರವೇ ಹಾಸನ ಜಿಲ್ಲೆಯನ್ನು ಅಧಿಕೃತವಾಗಿ ಲಾಕ್‍ಡೌನ್ ಮಾಡಿದರೆ ಒಳಿತು ಎಂದು ಎಂಎಲ್‍ಸಿ ಗೋಪಾಲಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Laxmi News 24×7