ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣ ಹಾಗೂ ಅತ್ಯಾಚಾರ ಸಂತ್ರಸ್ತೆ, ಖಾಸಗಿ ಸುದ್ದಿ ಸಂಸ್ಥೆಯ ಮುಖ್ಯಸ್ಥ ರಾಕೇಶ್ ಶೆಟ್ಟಿ ವಿರುದ್ಧ ವಿನಯ್ ಕುಲಕರ್ಣಿ ದಾಖಲಿಸಿದ್ದ ಪ್ರಕರಣಗಳನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.
ಕುಲಕರ್ಣಿ ಬೆಂಗಳೂರು, ಧರ್ಮಸ್ಥಳದಲ್ಲಿ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಹಾವೇರಿ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಸಂಜಯನಗರ ಪೊಲೀಸ್ ಠಾಣೆಯಲ್ಲಿ ಅ. 8ರಂದು ಪ್ರಕರಣ ದಾಖಲಿಸಿದ್ದರು. ಅದರ ಬೆನ್ನಲ್ಲೇ ಅದಕ್ಕೆ ಪ್ರತಿಯಾಗಿ ವಿನಯ್ ಕುಲಕರ್ಣಿ ಅವರು, ದೂರುದಾರ ಮಹಿಳೆ ಮತ್ತು ಖಾಸಗಿ ಸುದ್ದಿವಾಹಿನಿ ಮುಖ್ಯಸ್ಥರು 2 ಕೋಟಿ ರೂ.ಗೆ ಬೇಡಿಕೆ ಇಟ್ಟು, ಹಣ ಕೊಡದಿದ್ದರೆ ವೀಡಿಯೋಗಳನ್ನು ಬಹಿರಂಗ ಪಡಿಸುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರತಿ ದೂರು ದಾಖಲಿಸಿದ್ದರು.
Laxmi News 24×7