ಬೆಂಗಳೂರು: ರಾಜ್ಯದ ವಿವಿಧ ಠಾಣೆಗಳಲ್ಲಿ ರೈತ ಮುಖಂಡರು, ಕನ್ನಡಪರ ಹೋರಾಟಗಾರರು, ಕೆಲವು ಸ್ಥಳೀಯ ರಾಜಕೀಯ ಮುಖಂಡರ ವಿರುದ್ಧ ದಾಖಲಾಗಿರುವ 43 ಕ್ರಿಮಿನಲ್ ಪ್ರಕರಣಗಳನ್ನು ಸರಕಾರ ಹಿಂಪಡೆದಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟಾರೆ 60 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಈ ಪೈಕಿ ಕೂಲಂಕಷವಾಗಿ ಚರ್ಚಿಸಿ 43 ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಚಿವ ಸಂಪುಟದ ಉಪಸಮಿತಿಯು ನಡೆಸಿದ ವಿವಿಧ ಸಭೆಗಳಲ್ಲಿ 60 ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆಯಲು ಶಿಫಾರಸು ಮಾಡಿತ್ತು. ಅವುಗಳನ್ನು ಮರು ಪರಿಶೀಲಿಸಲು ಕೋರಲಾಗಿತ್ತು. ಅಷ್ಟೇ ಅಲ್ಲ, ಈ ಸಂಬಂಧ ಹೈಕೋರ್ಟ್ ಅನುಮತಿ ಪಡೆಯುವಂತೆಯೂ ಹೇಳಲಾಗಿತ್ತು ಎಂದರು.
ಅದರಂತೆ ಆ 60 ಪ್ರಕರಣಗಳ ಪೈಕಿ ಸಂಪುಟ ಸಭೆಯು 43 ವಾಪಸ್ ಪಡೆಯಲು ನಿರ್ಧರಿಸಿದೆ ಎಂದೂ ತಿಳಿಸಿದರು.
Laxmi News 24×7