ಹುಬ್ಬಳ್ಳಿಯ ಗೋಪನಕೊಪ್ಪ ಸಮೀಪ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಲಾಗಿದೆ. ಹಳೆದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ.
ಶಿವರಾಜ್(22) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಕ್ಷುಲ್ಲಕ ಕಾರಣಕ್ಕೆ ನಿನ್ನ ಸಂದೀಪ್ ಎಂಬಾತನ ಜೊತೆಗೆ ಗಲಾಟೆಯಾಗಿತ್ತು. ಹೀಗಾಗಿ ಶಿವರಾಜನನ್ನು ಸಂದೀಪ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಮನೆಯಿಂದ ಹೊರಗೆ ಹೋದಾಗ ದುಷ್ಕರ್ಮಿಗಳು ಶಿವರಾಜ್ ನನ್ನು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Laxmi News 24×7