Breaking News

ವಿಶ್ವ ವಿಖ್ಯಾತ ಮೈಸೂರು ದಸರಾ `ಜಂಬೂಸವಾರಿ’ ಮೆರವಣಿಗೆಗೆ ಕ್ಷಣಗಣನೆ: ಇಲ್ಲಿದೆ ಇಂದಿನ ಕಾರ್ಯಕ್ರಮಗಳ ವಿವರ

Spread the love

ಮೈಸೂರು: ಇಂದು ನಡೆಯುವ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭಗೊಂಡಿದೆ. ಹಾಗಾದ್ರೇ ಇಂದಿನ ಕಾರ್ಯಕ್ರಮಗಳು ಏನು? ಯಾವ ಸಂದರ್ಭದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಆರಂಭಗೊಳ್ಳಲಿದೆ ಎನ್ನುವ ಸಂಪೂರ್ಣ ವಿವರ ಮುಂದಿದೆ ಓದಿ.

ಹೀಗಿದೆ ಇಂದಿನ ಮೈಸೂರು ದಸರಾ ಜಂಬೂ ಸವಾರಿಯ ಕಾರ್ಯಕ್ರಮಗಳ ಸಂಪೂರ್ಣ ವಿವರ

ಇಂದು ಮಧ್ಯಾಹ್ನ 1.41ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿಯ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ.

ಜಂಬೂಸವಾರಿ ಹಿನ್ನೆಲೆಯಲ್ಲಿ ಅರಮನೆ ಅಂಗಳದಲ್ಲಿ 40 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಚಾಮುಂಡಿ ಬೆಟ್ಟದಿಂದ ಉತ್ಸವಮೂರ್ತಿ ಇಂದು ಬೆಳಿಗ್ಗೆ 8 ಗಂಟೆಗೆ ಹೊರಬಂದು ಮೆರವಣಿಗೆ ಮೂಲಕ ಅರಮನೆಯತ್ತ ಸಾಗುತ್ತದೆ‌.

ಬೆಳಿಗ್ಗೆ 10:15 ಕ್ಕೆ ಅರಮನೆಯಲ್ಲಿ ಉತ್ತರ ಪೂಜೆ ಆರಂಭ (ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆಗಳು ಸವಾರಿ ತೊಟ್ಟಿಗೆ ಆಗಮನ). ಬೆಳಿಗ್ಗೆ 10 ಗಂಟೆಯಿಂದ‌ ಅರಮನೆಯ ಶ್ವೇತವರಾಹಸ್ವಾಮಿ ದೇವಸ್ಥಾನದಲ್ಲಿ ಜಟ್ಟಿಗಳಿಂದ ಸಿದ್ಧತೆ ನಡೆಯಲಿದೆ. ಆ ಬಳಿಕ ಬೆಳಿಗ್ಗೆ 10:45 ರಿಂದ 11 ಗಂಟೆ ಒಳಗೆ ಸವಾರಿ ತೊಟ್ಟಿಯಲ್ಲಿ ಜಟ್ಟಿ ಕಾಳಗ ನಡೆಯಲಿದೆ.

ಜಟ್ಟಿಕಾಳಗ ಮುಗಿದ ಬಳಿಕ, 11:20 ರಿಂದ 11:45 ರ ವರೆಗೆ ಅರಮನೆ ಆವರಣದ ಭುವನೇಶ್ವರಿ ದೇವಸ್ಥಾನಕ್ಕೆ ವಿಜಯಯಾತ್ರೆ ಹೊರಡಲಿದ್ದು, ಬನ್ನಿಪೂಜೆ ಬಳಿಕ ಸ್ವಸ್ಥಾನಕ್ಕೆ ವಾಪಸ್ ಆಗಲಿದೆ. ಬಳಿಕ‌ ಯದುವೀರ್ ಕಂಕಣ ವಿಸರ್ಜನೆ ಮಾಡಲಿದ್ದಾರೆ.


Spread the love

About Laxminews 24x7

Check Also

ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ: ಮಧು ಬಂಗಾರಪ್ಪ

Spread the loveಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ