ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಹಾಗೂ ಹೆಚ್ ಡಿಕೆ ಆಪ್ತ ಸುರೇಶ್ ಬಾಬು ವಿರುದ್ಧ ಎಸ್‌ಐಟಿಯ ಐಜಿಪಿ, ಐಪಿಎಸ್ ಅಧಿಕಾರಿ ಚಂದ್ರ ಶೇಖರ್ ಅವರು ಪೊಲೀಸರಿಗೆ ಬೆದರಿಕೆ, ಸುಳ್ಳು ಆರೋಪಗಳ ಬಗ್ಗೆ ದೂರು ನೀಡಿದ್ದಾರೆ.
ಅವರ ದೂರು ಆಧರಿಸಿ, ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿದೆ.
ಸಂಜಯನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿರುವಂತ ಎಸ್‌ಐಟಿಯ ಐಜಿಪಿ ಚಂದ್ರ ಶೇಖರ್.ಎಂ ಅವರು, ನಾನು ಐಎಸ್ ಡಿ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಎಸ್‌ಐಟಿಯಲ್ಲಿ ಎಡಿಜಿಪಿಯಾಗಿ ಕೆಲಸ ಮಾಡುತ್ತಿರುತ್ತೇನೆ. ಹೆಚ್ ಡಿ ಕುಮಾರಸ್ವಾಮಿ ಮೇಲೆ ಮೊಕದಮ್ಮೆ ಸಂಖ್ಯೆ 16/2014ರಲ್ಲಿ ತನಿಖೆ ಕೈಗೊಂಡಿದ್ದು, ಇವರ ವಿರುದ್ಧ ಹೆಚ್ಚುವರಿ ಸಾಕ್ಷ್ಯಾಧಾರಗಳು ದೊರೆತಿದ್ದರಿಂದ, ಕಾನೂನು ಕ್ರಮ ಕೈಗೊಳ್ಳಲು ಅನುಮತಿಗಾಗಿ ರಾಜ್ಯಪಾಲರಿಗೆ ಕೋರಲಾಗಿದೆ ಎಂದಿದ್ದಾರೆ.

ರಾಜ್ಯಪಾಲರಿಗೆ ಹೆಚ್.ಡಿ ಕುಮಾರಸ್ವಾಮಿ ವಿರುದ್ಧದ ಪ್ರಕರಣದ ತನಿಖೆಗೆ ರಾಜ್ಯಪಾಲರಿಗೆ ಅನುಮತಿ ಕೋರಿದ ನಂತ್ರ, ಈ ಬಗ್ಗೆ ದಿನಾಂಕ 28-09-2024 ಮತ್ತು 29-09-2024ರಂದು ಪತ್ರಿಕಾ ಘೋಷ್ಠಿಯನ್ನು ನೆಡೆಸಿ ನನ್ನ ಬಗ್ಗೆ ಸುಳ್ಳು ಮತ್ತು ದುರುದ್ದೇಶ ಪೂರಿತ ಆರೋಪಗಳನ್ನು ಮಾಡಿ, ಬೆದರಿಕೆಯನ್ನು ಹಾಕಿರುತ್ತಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನನ್ನನ್ನು ಕರ್ನಾಟಕ ರಾಜ್ಯ ಕೇಡರ್ ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಮೌಖಿಕವಾಗಿ ಬೆದರಿಕೆ ಹಾಕಿರುತ್ತಾರೆ. ನನ್ನ ಕುಟುಂಬದವರ ವಿರುದ್ಧವೂ ಸಹ ಸುಳ್ಳು ಆಪಾದನೆಗಳ್ನು ಮಾಡಿ ಅವರಿಗೂ ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿರುತ್ತಾರೆ. ನಾನು ಬೌರಿಂಕ್ ಆಸ್ಪತ್ರೆಯಿಂದ ಸುಳ್ಳು ಮೆಡಿಕಲ್ ದಾಖಲೆಗಳನ್ನು ಪಡೆದು, ಕರ್ನಾಟಕ ಕೇಡರ್ ನಲ್ಲೇ ಮುಂದುವರೆಯುತ್ತಿರುವುದಾಗಿ ಸುಳ್ಳು ಆರೋಪ ಮಾಡಿರುತ್ತಾರೆ. ನಾನು ಲಂಚ ತೆಗೆದುಕೊಂಡಿರುವುದಾಗಿ ಸುಳ್ಳು ಆರೋಪ ಮಾಡಿರುತ್ತಾರೆ ಎಂದು ತಿಳಿಸಿದ್ದಾರೆ.
Laxmi News 24×7